ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಸಾವು
ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.

ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ.
ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.


















