“ವಿಬಿ-ಜಿ ರಾಮ್-ಜಿ” ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ ಜಾಗೃತಿ ಸಮಾವೇಶ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಇಂದು ದಿನಾಂಕ 31-01-2026 ರಂದು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ “VB-G RAM-G ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ ಜಾಗೃತಿ ಸಮಾವೇಶ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಹೆರ್ಗ ದಿನಕರ್ ಶೆಟ್ಟಿ, ರೇಷ್ಮಾ ಶೆಟ್ಟಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಕಮಲಾಕ್ಷ್ ಹೆಬ್ಬಾರ್ ಉಪಸ್ಥಿತರಿದ್ದರು.


















