ಜೆಸಿಐ ಸುರತ್ಕಲ್ ವತಿಯಿಂದ ಶಾಲಾ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿಯ ತರಬೇತಿ

ಸುರತ್ಕಲ್:ಜೆಸಿಐ ಸುರತ್ಕಲ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಚೇಳಾಯರ ಇಲ್ಲಿನ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುರತ್ಕಲ್ ಇದರ ಇದರ ಅಧ್ಯಕ್ಷರಾದ ಜೆಸಿ ಅಶೋಕ್ ಎನ್ ರವರು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಫೇಮಸ್ ಯೂತ್ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು ಅವರು ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಗಳ ಬಗ್ಗೆ ಸವಿವರವಾಗಿ ತಿಳಿಸಿ ಹೇಳಿದರು
ಕಾರ್ಯಕ್ರಮದಲ್ಲಿ ಜೆಸಿಐ ಸುರತ್ಕಲ್ ಇದರ ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಶ್ರೀಶೈ ಶೆಟ್ಟಿ, ಪೂರ್ವ ಅಧ್ಯಕ್ಷರುಗಳಾದ ಜೆಸಿ ಪುಷ್ಪರಾಜ್ ಶೆಟ್ಟಿ, ಜೆಸಿ ಜ್ಯೋತಿ ಪಿ ಶೆಟ್ಟಿ, ತರಬೇತಿದಾರರಾದ ಜೆಸಿ ಡಾಕ್ಟರ್ ಭಾರತಿ ನಿರಂಜನ್, ಸದಸ್ಯರುಗಳಾದ ಜೆಸಿ ಪ್ರಾರ್ಥನಾ, ಜೆಸಿ ಜ್ಯೋತಿ ಜಯರಾಮ್ ಶೆಟ್ಟಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕಿಶೋರಿಯವರು ಉಪಸ್ಥಿತರಿದ್ದರು, ಜೆಸಿ ಡಾಕ್ಟರ್ ಭಾರತಿ ನಿರಂಜನ್ ಶಾಲಾ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ ಮಾಹಿತಿಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರರಿಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Related Posts

Leave a Reply

Your email address will not be published.