ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ

ಉಡುಪಿಯ:ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಉದ್ಘಾಟಿಸಿ ಮಾತನಾಡಿದ ಅವರು ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. ಮನುಷ್ಯ ಎಷ್ಟು ವರ್ಷ ಬದುಕಿದ್ದೇನೆ ಎನ್ನುವುದುಕಿಂತ ಎಷ್ಟು ವರ್ಷ ಆರೋಗ್ಯವಂತನಾಗಿ ಬದುಕಿದ್ದೇನೆ ಎನ್ನುವುದು ಬಹಳ ಪ್ರಮುಖವಾಗಿರುತ್ತದೆ. ನೇತ್ರ ಜ್ಯೋತಿ ಕಾಲೇಜಿನಲ್ಲಿ ಪ್ರಾರಂಭವಾದ ಸುಸಜ್ಜಿತ ಫಿಸಿಯೋಥೆರಪಿ ಕ್ಲಿನಿಕ್ ನ ಪ್ರಯೋಜನವನ್ನು ಎಲ್ಲರು ಪಡೆಯುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಉಜ್ವಲ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪುರುಷೋತ್ತಮ ಶೆಟ್ಟಿಯವರು ಮಾತನಾಡಿ ಭವಿಷ್ಯದಲ್ಲಿ ನೇತ್ರ ಜ್ಯೋತಿ ಕಾಲೇಜು ಒಂದು ಶ್ರೇಷ್ಠ ಸಂಸ್ಥೆಯಾಗಿ ಮೂಡಿ ಬರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಗೌರವ ಅತಿಥಿ ಬಡಗು ಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಶ್ರೀ ಇಂದ್ರಾಳಿ ಜಯಕರ ಶೆಟ್ಟಿಯವರು ಮಾತನಾಡಿ ಬದಲಾದ ವೈದ್ಯಕೀಯ ಕ್ಷೇತ್ರದಲ್ಲಿ ಶಸ್ತ್ರ ಚಿಕಿತ್ಸೆಗಿಂತ ಫಿಸಿಯೋಥೆರಪಿಯಂತಹ ಚಿಕಿತ್ಸೆಗಳು ಹೆಚ್ಚು ಪರಿಣಾಮಕಾರಿ ಎಂದರು. ಡಾ.ಕೃಷ್ಣಪ್ರಸಾದ್ ಕೂಡ್ಲೂರವರ ಸಮಾಜಮುಖಿ ಕಾರ್ಯಗಳಿಗೆ ಮೆಚ್ಚಿಗೆ ವ್ಯಕ್ತ ಪಡಿಸಿ, ಸಂಸ್ಥೆಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷೆಯನ್ನು ವಹಿಸಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲುರವರು ಮಾತನಾಡಿ ವೈದ್ಯಕೀಯ ಕ್ಷೇತ್ರ ಪರಿಪೂರ್ಣತೆಯನ್ನು ಪಡೆಯಬೇಕಾದರೆ ಅರೆ ವೈದ್ಯಕೀಯ ಸಿಬ್ಬಂದಿಗಳ ಪಾತ್ರ ಬಹಳ ಮುಖ್ಯ ಎಂದರು. ವಿಧ್ಯಾರ್ಥಿಗಳಿಗೆ ಮತ್ತು ಊರಿನ ಜನರಿಗಾಗಿ ಇಂತಹ ಸುಸಜ್ಜಿತ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದೇವೆ, ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಅದರ ಉಪಯೋಗವನ್ನು ಪಡೆಯಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ಅವರು ಮಾತನಾಡಿ ಈಗಿನ ಯಾತ್ರೀಕೃತ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆ ಜನರನ್ನು ಕಾಡುತ್ತಿದೆ. ನಮ್ಮ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅನೇಕ ವೈದ್ಯಕೀಯ ಕೋರ್ಸುಗಳ ಜೊತೆಗೆ ಫಿಸಿಯೋಥೆರಪಿ ಕಾಲೇಜನ್ನು ಸ್ಥಾಪಿಸಿದ್ದು ಅದಕ್ಕೆ ಪೂರಕವಾಗುವಂತೆ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದೇವೆ. ಎಲ್ಲರು ಇದರ ಪ್ರಯೋಜನ ಪಡೆಯಬೇಕು ಎಂದರು.

ಕಾಲೇಜಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೌರಿ ಪ್ರಭು ನೇತ್ರಜ್ಯೋತಿ ಫಿಸಿಯೋಥೆರಪಿ ಕ್ಲಿನಿಕ್ ನಲ್ಲಿ ಸಿಗುವ ಸೌಲಭ್ಯಗಳ ಕುರಿತು ತಿಳಿಸಿದರು.
ವೇದಿಕೆಯಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟಿ ನ ಟ್ರಸ್ಟಿ ನಿವೃತ್ತ ಡಿ ಸಿ ಆಫ್ ಶ್ರೀ ರಘುರಾಮ್ ರಾವ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆ ಯೊಂದಿಗೆ ಪ್ರಾರಂಭಿಸಲಾಯಿತು. ಕಾಲೇಜಿನ ಕಾರ್ಡಿನೇಟರ್ ಮಾಧವ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರಾವ್ಯ ವಂದಿಸಿದರು. ಉಪನ್ಯಾಸಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.