ಅಮೆರಿಕದಲ್ಲಿ ಕನ್ನಡಿಗ ನಾಪತ್ತೆ ಪ್ರಕರಣ: ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ

ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದನ್ನು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನಾವು ನಮ್ಮ ಸಂತಾಪವನ್ನು ಸೂಚಿಸುತ್ತೇವೆ ಎಂದು ರಾಯಭಾರ ಕಚೇರಿಯು ತಿಳಿಸಿದೆ.

“ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸಹಾಯಗಳನ್ನು ನೀಡಲು ಭಾರತೀಯ ರಾಯಭಾರಿ ಕಚೇರಿಯು ಸಿದ್ಧವಾಗಿದೆ. ಮೃತದೇಹವನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಹಿಂತಿರುಗಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ತಿಳಿಸಿದೆ.

೨೨ ವರ್ಷದ ಸಾಕೇತ್ ಫೆ. 9ರ ಬೆಳಿಗ್ಗಿನಿಂದ ಕಾಣೆಯಾಗಿದ್ದರು. ಅವರು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ವ್ಯಾಸಂಗ ಮಾಡುತ್ತಿದ್ದರು.

ನಾಪತ್ತೆ ಆಗಿರುವ ಬಗ್ಗೆ ಬರ್ಕ್ಲಿ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಆರು ದಿನಗಳಿಂದ ಪೊಲೀಸರು ಸಾಕೇತ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಬರ್ಕ್ಲಿ ಬೆಟ್ಟಗಳ ತಪ್ಪಲಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Related Posts

Leave a Reply

Your email address will not be published.