ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಅಪ್ಪಳಿಸಿದ ಸುಂಟರಗಾಳಿ: ಐವರ ಸಾವು: 33ಮಂದಿಗೆ ಗಾಯ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ.

ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ.

ಸುಂಟರಗಾಳಿ ಬಳಿಕ ದಕ್ಷಿಣ ಚೀನಾದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸದ್ಯ ಚೀನಾ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

Related Posts

Leave a Reply

Your email address will not be published.