ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಫೇಮಸ್ ಯು ಕ್ಲಬ್ಬಿನ ಕಾರ್ಯದರ್ಶಿ ಹಿಮಕರ್ ಕೋಟ್ಯಾನ್, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನಿಕಟ ಪೂರ್ವ ಅಧ್ಯಕ್ಷರಾದ ಸಂಜೀವ ಕರ್ಕೇರ ರವರು ಉಪಸ್ಥಿತರಿದ್ದರು, ಆಧಾರ್ ಸೇವಾ ಕೇಂದ್ರ ಮಂಗಳೂರು ಇಲ್ಲಿನ ರಂಜನಿ, ಅನ್ವಿತಾ ಮತ್ತು ಪ್ರವೀಣ್ ರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಶಿಬಿರದಲ್ಲಿ ಒಟ್ಟು 216 ಜನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

add - tandoor .

Related Posts

Leave a Reply

Your email address will not be published.