ಪುತ್ತೂರಿನಲ್ಲಿ ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ
ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‍ನಲ್ಲಿ ನಡೆಯಿತು.
ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ವೇಗವಾಗಿ ಬಲವರ್ಧನೆಗೊಳ್ಳಲಿದೆ ಎಂದು ಅವರು ಹೇಳಿದರು.ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ , ಹಿರಿಯರಾದ ಬಿ ಪುರಂದರ ಭಟ್, ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ.ಬಿ.ಕೆ ವಿಶು ಕುಮಾರ್ ಸೇರಿದಂತೆ ಮೊದಲಾದರು ಉಪಸ್ಥಿತರಿದ್ದರು.