ಬೆಳ್ಳಾರೆ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ – ಅಪಾರ ನಷ್ಟ
ಬೆಳ್ಳಾರೆಯ ಹೋಟೆಲೊಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ನಷ್ಟವಾದ ಘಟನೆ ನ.12 ರಂದು ನಡೆದಿದೆ.
ಬೆಳ್ಳಾರೆ ಮುಖ್ಯರಸ್ತೆ ಸಮೀಪವಿರುವ ತೃಪ್ತಿ ಹೋಟೆಲ್ ನಲ್ಲಿ ಗ್ಯಾಸ್ ಸ್ಟವ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹತ್ತಿರವಿದ್ದ ಪ್ರಿಡ್ಜ್ ಸಂಪೂರ್ಣ ಸುಟ್ಟುಹೋಗಿದೆ. ಪ್ರಿಡ್ಜ್ ಮೇಲಿದ್ದ ಎರಡು ಮೊಬೈಲ್ ಹಾಗೂ ಇನ್ನಿತರ ಹಲವು ವಸ್ತುಗಳು ಸುಟ್ಟುಹೋಗಿವೆ.
ನೆರೆಕರೆಯ ಅಂಗಡಿಯವರು ಹಾಗೂ ರಿಕ್ಷಾ ಚಾಲಕರು ಮತ್ತಿತರರು ಬೆಂಕಿ ನಂದಿಸಲು ಸಹಕರಿಸಿದ್ದು ಹೆಚ್ಚಿನ ಅನಾಹುತವನ್ನು ತಪ್ಪಿಸಿದಂತಾಗಿದೆ.