ನಟ ಕಿಚ್ಚ ಸುದೀಪ್ ಅವರಿಗೆ  ಮಾತೃ ವಿಯೋಗ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ. ಕಿಚ್ಚ ಸುದೀಪ್ ತಾಯಿಯ ಬಗ್ಗೆ ಆಗಾಗ ವೇದಿಕೆ ಮೇಲೆ ಹೇಳಿಕೊಂಡಿದ್ದರು. ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಕಿಚ್ಚ ಸುದೀಪ್ ಕುಟುಂಬದಲ್ಲಿ ಶೋಕ ಮನೆ ಮಾಡಿದೆ.

Related Posts

Leave a Reply

Your email address will not be published.