“ಕಲ್ಜಿಗ ಸಿನಿಮಾ ನೋಡಿ ಮೆಚ್ಚಿದ ನಟ ರಿಷಬ್ ಶೆಟ್ಟಿ”
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ ಬೆನ್ನಿಗೆ ನಿಲ್ಲುವ ಕೊರಗಜ್ಜ, ಅಧರ್ಮದಲ್ಲಿ ನಡೆಯುವವರನ್ನು ಶಿಕ್ಷಿಸುವ ಕತೆ ರಿಷಬ್ ಶೆಟ್ಟಿ ಅವರಿಗೆ ತುಂಬಾ ಇಷ್ಟವಾಯಿತು. ಸಿನಿಮಾದ ಕ್ಯಾಮರಾ ವಕ್೯, ಹಿನ್ನಲೆ ಸಂಗೀತವನ್ನು ರಿಷಬ್ ಮೆಚ್ಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಪ್ರಗತಿ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಶನಿಲ್ ಗುರು, ನಟ ಅರ್ಜುನ್ ಕಾಪಿಕಾಡ್, ನಿರ್ಮಾಪಕ ಶರತ್ ಕುಮಾರ್ , ನಿರ್ದೇಶಕ ಸುಮನ್ ಸುವರ್ಣ, ಸಿನಿಮಾ ವಿತರಕ ಸಚಿನ್ ಉಪ್ಪಿನಂಗಡಿ, ಶ್ಲಾಘ ಸಾಲಿಗ್ರಾಮ ಉಪಸ್ಥಿತರಿದ್ದರು.