ಅದಮಾರಿನಲ್ಲಿ ಕೆಸರ್ಡ್ ಗೊಬ್ಬು ಪಂಥ

ಅದಮಾರು ಆದರ್ಶ ಸಂಘಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆ, ಪಿಪಿಸಿ ಅದಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಮೂಡಬೆಟ್ಟು ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಪಂಥ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಉದಯ ಕೆ. ಶೆಟ್ಟಿ ಎರ್ಮಾಳು ಉದ್ಘಾಟಿಸಿದರು. ಈ ಸಂದರ್ಭ ಅವರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ನಮ್ಮ ಮಕ್ಕಳಿಗೆ ಕೃಷಿಯ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಆದರ್ಶ ಯುವಕಮಂಡಲ ಮಾಡುತ್ತಿರುವ ಕೆಲಸ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅದಮಾರು ಪಿಪಿಸಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ರಾಮಕೃಷ್ಣ ಪೈ ವಹಿಸಿದ್ದರು. ವೇದಿಕೆಯಲ್ಲಿ ಬಡಾ ಗ್ರಾಪಂ ಅಧ್ಯಕ್ಷೆ ಜ್ಯೋತಿ ಗಣೇಶ್, ಆದರ್ಶ ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಜೆ ಶೆಟ್ಟಿ, ಮಹಿಳಾ ಮಂಡಲದ ಅಧ್ಯಕ್ಷೆ ಲತಾ ಆಚಾರ್ಯ, ಉದ್ಯಮಿ ನಾರಾಯಣ ಕೆ. ಶೆಟ್ಟಿ ಡಾ. ಜಯಶಂಕರ್ ಕಂಗಣ್ಣರು ಗಣೇಶ್ ಜೆ ಶೆಟ್ಟಿ, ಲಕ್ಷ್ಮೀನಾಯಕ್, ನಿಶ್ಮಿತಾಶೆಟ್ಟಿ, ಸುದರ್ಶನ್ ವೈ, ಶ್ರೀಕಾಂತ ರಾವ್ ವೇದಿಕೆಯಲ್ಲಿದ್ದರು. ಈ ಸಂದರ್ಭ ಪ್ರಾಂಶುಪಾಲ ರಾಮಕೃಷ್ಣ ಪೈ ಹಾಗೂ ಸುದರ್ಶನ್ ವೈ ಅವರನ್ನು ಸನ್ಮಾನಿಸಲಾಯಿತು. ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು. ಜ್ಯೋತಿದ್ರನಾಥ್ ಸ್ವಾಗತಿಸಿದರು. ಸಂತೋಷ ಶೆಟ್ಟಿ ವಂದಿಸಿದರು.
