ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ
ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ. ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಮಂಗಳೂರು ಜೈಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇದಕ್ಕೂ ಮೊದಲು ಎಡಿಜಿಪಿ ಅಲೋಕ್ ಕುಮಾರ್ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಭೇಟಿಯಾದರು. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ನಿಷೇಧಾಜ್ಞೆಯನ್ನು ಆ. 5ರವರೆಗೆ ವಿಸ್ತರಿಸಲಾಗಿದೆ. ತದ ಬಳಿಕ ಕಾನೂನು ಸ್ಯುವವಸ್ಥೆ ಕುರಿತು ಪೊಲೀಸರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.