ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ :ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಮಂಗಳೂರು ನಗರದಲ್ಲಿರುವ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆಯನ್ನು ಶರವು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರವು ರಾಘವೇಂದ್ರ ಶಾಸ್ತ್ರಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮವಿದ್ದರೆ, ಹೊರೆಕಾಣಿಕೆಯ ಕಚೇರಿ ಶರವು ದೇವಸ್ಥಾನದಲ್ಲಿ ಉದ್ಘಾಟಿಸುವುದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿ ಅದೇ ರೀತಿ ಬೀಬಿಲಚ್ಚಿಲ್ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಶರವು ದೇವಳದಲ್ಲಿ ಹೊರೆಕಾಣಿಕೆ ಕಚೇರಿಯಲ್ಲಿ ಉದ್ಘಾಟಿಸಿದ್ದೇವೆ ಎಂದು ಹೇಳಿದರು.

ಆನಂತರ ವೇದಮೂರ್ತಿ ಶ್ರೀ ಕೆ. ಲಕ್ಷ್ಮೀನಾರಾಯಣ ಅಸ್ರಣ್ಣರು ಮಾತನಾಡಿ, ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವನ್ನು ನಡೆಸಲು ಉದ್ದೇಶಿಸಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲಿ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆರೂರು ಪ್ರಭಾಕರ್ ರಾವ್ ಅವರು, ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬೀಬಿಲಚ್ಚಿಲ್‍ನ ಸಂಚಾಲಕರಾದ ಮೋನಪ್ಪ ಮೇಸ್ತ್ರಿ, ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮನೋಹರ್ ಸುವರ್ಣ, ಸುಧಾಕರ್ ಪೇಜಾವರ ಉಪಸ್ಥಿತರಿದ್ದರು.

Related Posts

Leave a Reply

Your email address will not be published.