ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.