ಮೈಸೂರು: ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಬಾಲ್ ಬ್ಯಾಡ್ಮಿಂಟನ್ನಲ್ಲಿ ಆಳ್ವಾಸ್ ತಂಡಕ್ಕೆ ಪ್ರಶಸ್ತಿ

ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ವಿಭಾಗದ ಪ್ರಶಸ್ತಿಯನ್ನು ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮೂಡಬಿದ್ರೆ ಆಳ್ವಾಸ್ ತಂಡ ಪಡೆದುಕೊಂಡಿದೆ.

ಮೈಸೂರು ವಿಶ್ವವಿದ್ಯಾನಿಲಯ ಗವಿಲ್ಯನ್ ಕ್ರೀಡಾಂಗಣದಲ್ಲಿ ನಡೆದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಲೀಗ್ ಪಂದ್ಯಗಳಲ್ಲಿ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡಗಳು ಕ್ರಮವಾಗಿ ಗುಲ್ಬರ್ಗ, ಬೆಳಗಾಂ , ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ತಂಡಗಳನ್ನು ನೇರ ಸೆಟ್ಟುಗಳಿಂದ ಮಣಿಸಿ ಪೂರ್ಣ ಅಂಕಗಳೊಂದಿಗೆ ಅವಳಿ ಪ್ರಶಸ್ತಿಯನ್ನು ಪಡೆಯಿತು.

ಪುರುಷರ ವಿಭಾಗದ ನಿರ್ಣಾಯಕ ಲೀಗ್ ಪಂದ್ಯದಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಗಾಂಧಿನಗರ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಹಾಗೂ ಮಹಿಳೆಯರ ವಿಭಾಗದ ನಿರ್ಣಾಯಕ ಪಂದ್ಯಗಳಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಸ್ವರ್ಣಂಬ ಹೊನ್ನುಡಿಕೆ ತಂಡಗಳನ್ನು ನೇರಸೆಟ್ಗಳಿಂದ ಮಣೆಸಿ ಪ್ರಶಸ್ತಿಯನ್ನು ಪಡೆದವು

ಪುರುಷರ ವಿಭಾಗದಲ್ಲಿ ಬೆಂಗಳೂರು ನಗರ ವಿಭಾಗವನ್ನು ಪ್ರತಿನಿಧಿಸಿದ ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ಹಾಗೂ ಮಹಿಳೆಯರ ವಿಭಾಗದಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸಿದ ಜಯ ಸ್ಪೋರ್ಟ್ಸ್ ಕ್ಲಬ್ ತೃತೀಯ ಸ್ಥಾನವನ್ನು ಪಡೆದುಕೊಂಡಿತು.

Related Posts

Leave a Reply

Your email address will not be published.