ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಮತದಾರರಿಗೆ ಮತದಾರ ಸ್ಲಿಪ್ ಗಳನ್ನು ಮನೆ ಮನೆಗೆ ತಲುಪಿಸಲಾಗಿದೆ ಆದರೆ ಮತದಾರರು ಚುನಾವಣಾ ಗುರುತು ಪತ್ರ ಅಧಾರ್ ಕಾರ್ಡ್ ಸೇರಿದಂತೆ ನಿಗದಿ ಪಡುಸಿದ 12 ಗುರುತು ಪತ್ರಗಳಲ್ಲಿ ಒಂದನ್ನು ಮತಗಟ್ಟೆಯಲ್ಲಿ ಹಾಜರು ಪಡಿಸಿ ಮತದಾರ ರ ಪಟ್ಟಿಯಲ್ಲಿ ಹೆಸರು ದಾಖಲಾಗಿದ್ದರೆ ಮತ ಚಲಾಯಿಸಬಹುದಾಗಿದೆ.ಮತದಾರರ ಹೆಸರು ಮತಪಟ್ಟಿಯಲ್ಲಿ ಇದೆಯೇ ಇಲ್ಲವೇ ಎಂದು ಮುಂಚಿತವಾಗಿ ಪರಿಶೀಲಿಸಲು ಅಂತರ್ಜಾಲದ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಮತಗಟ್ಟೆಯ 200 ಮೀಟರ್ ಪ್ರದೇಶದ ಒಳಗಡೆ ಅಭ್ಯಥಿಗಳ ಚುನಾವಣಾ ಭೂತ್ ಸ್ಥಾಪಿಸಲು ಅವಕಾಶವಿರುವುದಿಲ್ಲ ಮತ್ತು ಚುನಾವಣಾ ಸಂಬಂಧಿಸಿದ ಪ್ರಚಾರ ಚಟುವಟಿಕೆಗೆ ಅವಕಾಶವಿರುವುದಿಲ್ಲ. ಮತದಾನದ ದಿನದಂದು ಮತಗಟ್ಟೆಯ ಒಳಗಡೆ ಮೊಬೈಲ್ ಫೋನು/ ಕಾರ್ಡಲೆಸ್ ಫೋನುಗಳನ್ನು ಚುನಾವಣಾ ಕರ್ತವ್ಯ ಅಧಿಕಾರಿಯ ಹೊರತು ಉಳಿದವರು ಕೊಂಡೊಯ್ಯುವಂತಿಲ್ಲ. ಮತದಾರರಿಗೆ ಮತಗಟ್ಟೆಗಳಲ್ಲಿ ಮೊಬೈಲ್ ಫೋನುಗಳನ್ನು ಇರಿಸಲು ಮೊಬೈಲ್ ಫೋನ್ ಡೆಪೋಸಿಟ್ ಸೆಂಟರ್ ಗಳನ್ನು ತೆರೆಯಲು ಕ್ರಮವನ್ನು ಕೈಗೊಳ್ಳಲಾಗುತ್ತದೆ.

ಏ.24ರಿಂದ ಸಂಜೆ 6ರಿಂದ ಏ. 26ರ ಮತದಾನ ಮುಕ್ತಾಯದ ದಿನದವರೆಗೆ ಡ್ರೈ ಡೇ ಗಳೆಂದು ಘೋಷಣೆ ಮಾಡಲಾಗಿದೆ. ಸದರಿ ಈ ದಿನಗಳಂದು ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಗಿ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ ಮಾರಾಟವನ್ನು ನಿಷೇಧಿಸಲಾಗಿದೆ. ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆ ಮಾಡಲು ನಿಷೇಧವಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತದಾನವು ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಧ್ವನಿವರ್ದಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

add- ideal

Related Posts

Leave a Reply

Your email address will not be published.