ಆಲೂರಿನಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ನೀಡನೂರು ಗ್ರಾಮದ ದೇವರಾಜು ಎಂಬುವರನ್ನು 15 ದಿನದ ಹಿಂದೆ ಕಾಡಾನೆ ದಾಳಿ ಮಾಡಿ ಪ್ರಾಣಾಪಯದಿಂದ ಪಾರಾಗಿ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿಯವರು ಮೇಲಾಧಿಕಾರಿಯವರ ಸಮ್ಮುಖದಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಿ ಉತ್ತಮ ಚಿಕಿತ್ಸೆಯನ್ನು ಕೊಡಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.
