ನ.19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬ

ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶದ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತಿ ಸಮಿತಿಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಹೇಳಿದರು.

ಅವರು ನಗರದ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ಎರಡು ದಿನಗಳ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ 5ನೇ ತರಗತಿ ಮೇಲ್ಪಟ್ಟ 10ನೇ ತರಗತಿ ತನಕದ ಸುಮಾರು 15 ಸಾವಿರದಷ್ಟು ವಿದ್ಯಾರ್ಥಿಗಳು ಸಮಾವೇಶದಲ್ಲಿ ಭಾಗವಹಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 19ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಗೋಕಾರ್ಣನಾಥೇಶ್ವರ ಕಾಲೇಜು ಮೈದಾನದಿಂದ ಮೆರವಣಿಗೆಯು ಸಂಘಟನಿಕೇತನ ತನಕ ನಡೆಯಲಿದೆ. ನಂತರ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯದ ಮಹತ್ವದ ರಾಷ್ಟ್ರೀಯ ಮತ್ತು ರಆಜ್ಯದ ಮಹನೀಯ ಚಿಂತೆನೆಗಳ ಸಾಕ್ಷ್ಯಚಿತ್ರ ಪ್ರದರ್ಶನ, ಪುಸ್ತಕ ಪ್ರದರ್ಶನದ ಪ್ರದರ್ಶಿನಿ ಇವುಗಳಿಗೆ ಚಾಲನೆ ದೊರಕಲಿದೆ. ಕಾರ್ಯಕ್ರಮದಲ್ಲಿ ವಿವಿಧ ಗೋಷ್ಟಿಗಳು ನಡೆಯಲಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಶಾರದಾ ವಿದ್ಯಾಲಯದ ಅಧ್ಯಕ್ಷರಾದ ಎಂ.ಬಿ. ಪುರಾಣಿಕ್, ಕೆ.ಸಿ. ನಾಯಕ್, ಡಾ. ಸುಧಾಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.