ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಗೀತಾಂಜಲಿ ಸುವರ್ಣ ಇವರನ್ನು ಬಿಲ್ಲವರ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್, ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿ ಗಂಗಾಧರ ಪೂಜಾರಿ,ಸತ್ಯಜಿತ್ ಸುರತ್ಕಲ್, ಆನಂದ ಮಾಬೇನ್ ಕಟಪಾಡಿ, ಗಣೇಶ್ ಪೂಜಾರಿ ಗಂಜಿಮಠ, ಶಿವಾಜಿ ಸುವರ್ಣ, ನವೀನ್ ಅಮೀನ್, ಹರೀಶ್ ಅಮೀನ್ ಶಂಕರಪು ಹಾಗೂ ಪದ್ಮಾ ಪೂಜಾರ್ತಿ ಮತ್ತು ಬಿಲ್ಲವ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.