ದೇಶದ ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ

ಭಾರತದ ಸಂವಿಧಾನ ಶಿಲ್ಪಿ, ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾದ ಬಿ.ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನವಾಗಿದ್ದು, ದೇಶದ ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗ್‌ದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ ಭವನದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. 

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡು ದೇಶದ ಹಲವು ನಾಯಕರು ಜನತೆಗೆ ಶುಭಾಶಯ ತಿಳಿಸಿದ್ದಾರೆ. 1891ರಲ್ಲಿ ಮಹಾರಾಷ್ಟ್ರದ ಮಾಹೋದಲ್ಲಿ ದಲಿತ ಕುಟುಂಬದಲ್ಲಿ ಜನಿಸಿದ ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ತತ್ವ, ಆದರ್ಶಗಳು ದಮನಿತರಿಂದ ಹಿಡಿದು ಸಮ ಸಮಾಜದ ಚಿಂತಕರಿಗೆ ಸ್ಫೂರ್ತಿದಾಯಕವಾಗಿವೆ.

ನಮ್ಮ ಸಂವಿಧಾನದ ಶಿಲ್ಪಿ, ರಾಷ್ಟ್ರ ನಿರ್ಮಾಪಕರಲ್ಲಿ ಒಬ್ಬರಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಎಲ್ಲ ನಾಗರಿಕರಿಗೆ ಆತ್ಮೀಯ ಶುಭಾಶಯಗಳನ್ನು ಕೋರುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇರದ ಜೊತೆ ತಮ್ಮ ಸಂದೇಶ ಪತ್ರವನ್ನು ಹಂಚಿಕೊಂಡಿದ್ದಾರೆ. 

Related Posts

Leave a Reply

Your email address will not be published.