ಫೆ.11ರಂದು ಪುತ್ತೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಶಾ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೆÇ್ಕೀದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತು ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‍ರವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಮಾವೇಶ ನಡೆಯಲಿರುವ ಪುತ್ತೂರು ತೆಂಕಿಲ ವಿವೇಕಾನಂದ ಶಾಲೆಯ ಮೈದಾನದಲ್ಲಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ಕ್ಯಾಂಪೆÇ್ಕೀದ ಎಸ್.ಆರ್ ಸತೀಶ್ಚಂದ್ರ, ಕೃಷ್ಣಪ್ರಸಾದ್ ಸಹಿತ ಹಲವಾರು ಮಂದಿ ಜೊತೆಗಿದ್ದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ವೇದಿಕೆ ಸಹಿತ ಮೈದಾನದ ಮಾಹಿತಿ ನೀಡಿದರು. ವಿವೇಕಾನಂದ ಶಾಲೆಯ ಅಧ್ಯಕ್ಷ ರವಿನಾರಾಯಣ, ಸಂತೋಷ್ ಬೋನಂತಾಯ, ಆಂಗ್ಲ ಮಾದ್ಯಮ ಶಾಲೆಯ ಮುಖ್ಯಗುರು ಸತೀಶ್ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.