ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಸೈಂಟ್ ಜೋಕಿಮ್ ಚರ್ಚ್ ಪಾಲನ ಮಂಡಳಿಯ ಕಾರ್ಯದರ್ಶಿಯಾದ ಶ್ರೀಮತಿ ಜೆಸಿಂತಾ ವೇಗಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ದೇವಿಪ್ರಸಾದ್, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ| ಸುನಿಲ್ ಪ್ರವೀಣ್ ಪಿಂಟೋ,ಸೈಂಟ್ ಜೋಕಿಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಕಿರಣ್ ಕುಮಾರ್ , ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ರೀಲತಾ,ಸೈಂಟ್ ಜೋಕಿಮ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ,ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ದಕ್ಷ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಕ್ರೀಡಾ ನಾಯಕ ಅಕ್ಷಯ್ ಗೋಖಲೆ ಪ್ರತಿಜ್ಞಾವಿಧಿ ಬೋಧಿಸಿದರು .ಕಾರ್ಯಕ್ರಮವನ್ನು ವಂದನೀಯ ಫಾ| ಸುನಿಲ್ ಪ್ರವೀಣ್ ಪಿಂಟೋ ಸ್ವಾಗತಿಸಿ, ಶ್ರೀಮತಿ ದಕ್ಷ ವಂದಿಸಿದರು. ಶ್ರೀಮತಿ ವಾಣಿ ಕಾರ್ಯಕ್ರಮ ನಿರೂಪಿಸಿದರು.


















