ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ
ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತೆ ಇಗರ್ಜಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ರಾಜಾರಾಮ್ ಕೆ.ಬಿ, ರಮಾನಾಥ ವಿಟ್ಲ, ಶ್ರೀನಿವಾಸ ಶೆಟ್ಟಿ ಕೊಲ್ಯ, ವಿಕೆಎಂ ಅಶ್ರಪ್, ಪದ್ಮಿನಿ, ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಸುಶಾಂತ್ ಶೆಟ್ಟಿ, ಸುಮೀತ್ ಶೆಟ್ಟಿ, ಅಬ್ದುಲ್ ಕರೀಂ ಕುದ್ದುಪದವು, ರಾಮಣ್ಣ ಪಿಲಿಂಜ, ಅಬ್ದುಲ್ ರಹಿಮಾನ್ ಕುರುಂಬಳ, ವಸಂತ, ರಶೀದ್ ವಿ.ಎ, ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ವಿಕೆಎಂ ಹಂಝ, ಹನೀಪ್ ಹಳೆಮನೆ, ಮನೋಹರ ಲ್ಯಾನ್ಸಿ ಮೊದಲಾದವರು ಉಪಸ್ಥಿತರಿದ್ದರು.