ಮಂಗಳೂರು: ಕಪಿತಾನಿಯೋ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಕಪಿತಾನಿಯೋ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವು ಕಪಿತಾನಿಯೋ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವದ ಉಪನಿರ್ದೇಶಕರಾದ ಜಯಣ್ಣ ಸಿ.ಡಿ. ಅವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಪಿತಾನಿಯೋ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಪ್ರೆಸಿಲ್ಲ ಮಿನೇಜಸ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್ಸ್ ಟೇಬಲ್ ಪ್ರವೀಣ್ ಸಿದ್ದಪ್ಪ, ಕಪಿತಾನಿಯೋ ಖೋ-ಖೋ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಕೌಶಿಕ್ ಗರೋಡಿ, ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಹ್ಯಾರಿಯೆಟ್ ಪಿಂಟೊ, ಜಿಲ್ಲಾ ಕ್ರೀಡಾ ಸಂಯೋಜಕರಾದ ಶಶಿಧರ್ ಮಾಣಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ರೆಕ್ಸನ್ ಕ್ರಾಸ್ತಾ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.