: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್ 25 ರಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಕಾನ್ಪರೆನ್ಸ್ ಹಾಲ್ನಲ್ಲಿ ಚುನಾವಣೆ ಕುರಿತು ಹಿಯರಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ
ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ ಉಪ್ಪಳ ಮಂಗಲ್ಪಾಡಿಯ ಬಿಜೆಪಿಯ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರ ತಾಯಿ ದುರ್ಗಾ ರೈ ಅವರು ನಿಧನರಾಗಿದ್ದಾರೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ದಿವಂಗತ ಬಾಬು ರೈ ಮಲ್ಲಂಗೈ ಅವರ ಧರ್ಮ ಪತ್ನಿಯಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಎಂದು ಸುದ್ದಿ ಮೂಲಗಳು ತಿಳಿಸಿವೆ ವಿ4 ನ್ಯೂಸ್ ಬ್ಯುರೋ
ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ ವತಿಯಿಂದ ಸೂಚನಾ ಪ್ರತಿಭಟನೆ ನಡೆದರು ಈ ಬಗ್ಗೆ ತಮಗೇನು ಗೊಡವೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವ
ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್
ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ
ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದರು. ಈ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ , ಮಂಗಳೂರು, ಮೂಡಬಿದ್ರೆ, ಮುಲ್ಕಿ
ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ
ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು
ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು
ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ