Home Articles posted by v4news (Page 102)

ತೆಂಕ ಗ್ರಾ.ಪಂ.ನಲ್ಲಿ ಲಿಂಕ್ ರಸ್ತೆ ಕಾಮಗಾರಿ ಮುಗಿಸುವಂತೆ ಸಾರ್ವಜನಿಕರಿಂದ ಒತ್ತಾಯ

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಲಿಂಕ್ ರಸ್ತೆಗಳ ಆರಂಭಿಕ ಐವತ್ತು ಮೀಟರ್ ರಸ್ತೆ ಹೆದ್ದಾರಿ ಇಲಾಖೆ ನಡೆಸಬೇಕಾಗಿದ್ದರೂ ನಿರ್ಲಕ್ಷ್ಯ ಮಾಡಿದ ಇಲಾಖೆಯ ವಿರುದ್ಧ ಆಕ್ರೋಶ ಗೊಂಡ ಗಾ.ಪಂ. ಪ್ರತಿನಿಧಿಗಳು ಸಹಿತ ಸಾರ್ವಜನಿಕರು ಹೆದ್ದಾರಿ ಕಾಮಗಾರಿಗೆ ತಡೆಯೊಡ್ಡಿ, ಲಿಂಕ್ ರೋಡ್ ಕಾಮಗಾರಿ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯ

ಕಬಕ ಗ್ರಾ.ಪ.ನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ: ಗುಂಪು ಚದುರಿಸಿದ ಪೊಲೀಸರು

ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ನಡೆದಿದೆ.   ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ

‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ-ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು

ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವೆಲ್ಲರೂ, ಪ್ರಕೃತಿಯ ಮುಂದೆ ನಮ್ಮ ಸೀಮಿತ ಸಾಮರ್ಥ್ಯ ಮತ್ತೆ ಮತ್ತೆ ಸಾಬೀತಾಗಿರುವುದನ್ನು ಮನಗಂಡು, ‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ. ಕರಾವಳಿಯ ನೆಲ- ಜಲದ ಸಂರಕ್ಷಣೆಯೊಂದಿಗೆ ಕೃಷಿ – ಪ್ರವಾಸೋದ್ಯಮ, ಯುವಜನ ಸಬಲೀಕರಣ – ಕೌಶಲಾಭಿವೃದ್ಧಿಯ ಕ್ಷೇತ್ರಗಳಿಗೆ ಆದ್ಯತೆ ನೀಡಲು ಆಡಳಿತ ಬದ್ಧ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ

ಬಿ.ಸಿ ರೋಡ್‌ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಬಂಟ್ವಾಳ ಪೋಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗೃಹರಕ್ಷಕದಳ

ಬೈಂದೂರಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್‌ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೈಂದೂರು ತಾಲೂಕಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾವಳಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ ಸರಳ ರೀತಿಯಲ್ಲಿ ನೆರವೇರಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಯುವ ಉದ್ಯಮಿ ಕಿರಣ್ ಲೋಬೊ ಮಾತನಾಡುತ್ತಾ ನಮಗೆ ಸ್ವಾತಂತ್ರ್ಯ ಸಿಗಲು ಅದೆಷ್ಟೋ ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಅವರನ್ನು ಸ್ಮರಿಸ ಬೇಕಾದುದ್ದು ನಮ್ಮೇಲ್ಲರ ಕರ್ತವ್ಯವಾಗಿದೆ.ಇವತ್ತಿನ ಯುವ

ಸ್ವಾತಂತ್ರ್ಯದಿಂದಲೇ ಅಭಿವೃದ್ಧಿ : ಹರ್ಷಾದ್ ವರ್ಕಾಡಿ

ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ

ಕಾರ್ಕಳದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ: 75ನೇ ಅಮೃತ ಮಹೋತ್ಸವ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮಾನುಸಾರವಾಗಿ ಬಹಳ ಸರಳವಾಗಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.  ಕಾರ್ಕಳ ತಾಲೂಕು ತಹಶೀಲ್ದಾರರಾದ ಪ್ರಕಾಶ್ ಮರಬಳ್ಳಿ ಧ್ವಜಾರೋಹಣ ಮಾಡಿ ಮಾತನಾಡಿದರು. ಬ್ರಿಟಿಷರ ದಾಸ್ಯ ಸಂಕೋಲೆಯಿಂದ ಮುಕ್ತಿ ಗೊಂಡ ಭವ್ಯ ಭಾರತವು ನಡೆದು ಬಂದ ದಾರಿ ಹಾಗೂ ಸಾಧನೆ ತುಂಬಾ ಮಹತ್ವವಾದದ್ದು. ಭಾರತವು ಕೃಷಿ ಪ್ರಧಾನ ದೇಶವಾಗಿದೆ. ರಾಷ್ಟ್ರದ ಬೆನ್ನೆಲುಬಾದ ಕೃಷಿಕನ ಕೈ ಬಲಪಡಿಸುವುದು ನಮ್ಮ

ಮೂಡುಬಿದರೆಯಲ್ಲಿ 75ನೇ ಸ್ವಾತಂತ್ರೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜವನ್ನುಅರಳಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಂತರ ಮಾತನಾಡಿದ ಕೋಟ್ಯಾನ್ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ಶಶಿಕಿರಣ್ ಮತ್ತು ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ

ದ.ಕ. ಜಿಲ್ಲಾಡಳಿತದಿಂದ 75ನೇ ಸ್ವಾತಂತ್ರ್ಯೋತ್ಸವ: ಸಚಿವ ಅಂಗಾರ ಅವರಿಂದ ತುಳುವಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ

ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ನೀಡಿದ ಅವರು ನಮ್ಮ ದೇಶವಿಂದು ವಿಶ್ವದಲ್ಲೇ ಚಾರಿತ್ರಿಕ ಕಾಲಘಟ್ಟದಲ್ಲಿದೆ. ನಮಗೆ ಸಿಕ್ಕಿದ ಈ ಸ್ವಾತಂತ್ರ್ಯಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಅದೆಷ್ಟೋ ಕಷ್ಟನಷ್ಟಗಳನ್ನು ಹಿರಿಯರು

ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೊರೊನಾ ನಿರ್ವಹಣೆಗೆ ಮೂಲಸೌಕರ್ಯ ಕಲ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಇದೇ ತಿಂಗಳ 23ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಆದರೆ, ಕೋವಿಡ್ ಪಾಸಿಟಿವ್ ದರ ಹೆಚ್ಚಿರುವ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,