ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ
ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,
ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ
ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ
ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಲೋಕ ಅದಾಲತ್‍ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ
ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು ಘಟನೆಗೆ ಸಂಬಂಧಿಸಿ ಯುವತಿಯ ಸಂಬಂಧಿಕರು ಯುವಕನ ಕುಟುಂಬದವರು ಯುವತಿಗೆ ವರದಕ್ಷಿಣೆ ಕಿರುಕುಳ
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ
ಮಂಜೇಶ್ವರ : ಕಳೆದ ಕೆಲವು ದಿವಸಗಳಿಂದ ಕರ್ನಾಟಕ ಸರಕಾರ ಕೇರಳ ಗಡಿ ಭಾಗಗಳಲ್ಲಿ ಕಠಿಣವಾದ ನಿಯಂತ್ರಣಗಳನ್ನು ಹೇರುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ದಿನನಿತ್ಯ ಹೊಟ್ಟೆಪಾಡಿಗಾಗಿ ಮಂಗಳೂರನ್ನು ಆಶ್ರಯಿಸುತ್ತಿರುವ ಸಹಸ್ರಾರು ಮಂದಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ರೋಗಿಗಳ ಹೆಚ್ಚಳವಾಗುತ್ತಿರುವುದು ಅಲ್ಲಿಯಾ ಜನತೆ ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸುವುದರಿಂದ ಹೊರತು ಕೇರಳದಿಂದ ಸಾಗುವ ಜನತೆಯಿಂದಲ್ಲ.
ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ
ಟೋಕಿಯೊ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್


















