Mangalore based Custom T-Shirts and Jersey Manufacturers signed an MoU (Memorandum of Understanding) with Srinivas University. The Collaboration aims for better co-operation and strategic engagements in joint areas of Research, Internships, Apprenticeships, Consulting and Placements of student
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.
ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ
ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ
ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ ಗ್ರಾಮದ ಮಿತ್ತಳಿಕೆಯ ಗದ್ದೆಯಲ್ಲಿ ನಡೆಯಿತು .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಿಲ್ಲಾ
ಬಂಟ್ವಾಳದ ತಾಲೂಕಿನ ಜನತೆಗೆ ಉತ್ಕೃಷ್ಟ ವಾದ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರಿ ಆರೋಗ್ಯ ಬಸ್ ಆರಂಭಿಸಲಾಗಿದೆ. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಂಚಾರಿ ಆರೋಗ್ಯ ಬಸ್ ವ್ಯವಸ್ಥೆ ಮಾಡಲಾಗಿದೆ. ಜನರ ಆರೋಗ್ಯದ ಸುರಕ್ಷತೆಯ ಜಾಗೃತಿಯ ಸಲುವಾಗಿ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನ ಮಾಡಲಾಗಿದೆ. ಇನ್ನು ಕಾವಳಮೂಡುರು ಗ್ರಾಮ ಪಂಚಾಯತ್ ನ ಕೆದ್ದಳಿಕೆ ಶಾಲಾ ವಠಾರಕ್ಕೆ ಸಂಚಾರಿ ಆರೋಗ್ಯ ಬಸ್ ಆಗಮಿಸಿತು. ಇದರ ಸದುಪಯೋಗವನ್ನು
ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿನ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಲಕ್ಷ್ಮಣ ಎಂಬವರ ಮಗ ಕಾರ್ತಿಕ್ ಎಂಬಾತನ ಮೃತದೇಹವಿದಾಗಿದ್ದು ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸಂಜೆಯ ವೇಳೆ ಮನೆಯಿಂದ ಹೊರಟ ಕಾರ್ತಿಕ್ ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಇಂದು ಮುಂಜಾನೆ ೩ ಗಂಟೆಯ ವೇಳೆಗೆ ಮೃತದೇಹ ಪತ್ತೆಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ
ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು
ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ


















