ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ ಅಂತಾ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ
ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ ಮುಖ್ಯ.ಇಂತಹ ಜಗತ್ತಿನಲ್ಲಿ ಯುವ ಜನತೆಗೆ ಧಾರಾವಾಹಿ, ಸಿನಿಮಾ, ಮಾಡೆಲಿಂಗ್‍ನತ್ತ ಒಲವು ತೋರಿಸುವವರ ಸಂಖ್ಯೆ ಅತೀ ಹೆಚ್ಚು. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕು ನಟನೆಯ ಮೂಲಕ ಜನತೆಯ ಮನದಲ್ಲಿ ಅಚ್ಚಲಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ.
2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್‌ನಲ್ಲಿ ಸಮಗ್ರ ವರದಿಯನ್ನು ಬಿತ್ತರಿಲಾಗಿತ್ತು. ಜಕ್ರಿಬೆಟ್ಟು ಹೊಸ್ಮಾರ್ ಎಂಬಲ್ಲಿ ರಸ್ತೆ ಬದಿ ಪೈಪ್
ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಅನ್ನುವ ಆಡಿಯೋಗು ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಸಚಿವರಾದ ಈಶ್ವರಪ್ಪನವರು ಹೇಳಿಕೆಯನ್ನು ನೀಡಿದ್ದಾರೆ. ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ, ಯಾರೋ ಬೇಕಂತಲೇ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕಟೀಲ್‌ರವರು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದನ್ನು ಸಹಿಸದೆ
ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು
ಮಂಜೇಶ್ವರ: ಎಲ್ಲಾ ರೀತಿಯ ದಾಖಲೆಗಳನ್ನು ಹಾಜರು ಪಡಿಸಿದರೂ ಇಲ್ಲ ಸಲ್ಲದ ಕಾರಣಗಳನ್ನು ಮುಂದಿಟ್ಟು ಜಾತಿ ಪ್ರಮಾಣ ಪತ್ರ ನೀಡಲು ವಿಳಂಭ ಮಾಡಿದ ಕುಂಜತ್ತೂರು ವಿಲೇಜ್ ಅಧಿಕಾರಿಯ ತಾತ್ಕಾಲಿಕ ಉಸ್ತುವಾರಿಯಲ್ಲಿರುವ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಐ ಪಕ್ಷದ ಅಧೀನತೆಯಲ್ಲಿರುವ ಎಐವೈಎಫ್ ಸಂಘಟನೆಯ ಮಂಜೇಶ್ವರ ವಲಯಾಧ್ಯಕ್ಷ ದಯಾಕರ ಹಾಗೂ ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ ಕುಂತೂರು, ಮಂಜೇಶ್ವರ ಗ್ರಾ. ಪಂ. ಉಪಾಧ್ಯಕ್ಷ ಸಿದ್ದೀಖ್, ಕಾಂಗ್ರೆಸ್
ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಕುಂಪಲದ ಚರಣ್ (31) ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದಾನೆ. ದೇರಳಕಟ್ಟೆಯಿಂದ ಮಂಗಳೂರಿಗೆ ಸೋಮವಾರ ತುರ್ತಾಗಿ ಬರುತ್ತಿದ್ದ ಆ್ಯಂಬ್ಯುಲೆನ್ಸ್ನ ಸುಗಮ ಸಂಚಾರಕ್ಕೆ ಅಡಚಣೆಯಾಗುವಂತೆ ಆರೋಪಿ ಚರಣ್ ತಾನು ಚಲಾಯಿಸುತ್ತಿದ್ದ ಕಾರನ್ನು ಅಡ್ಡಾದಿಡ್ಡಿ
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯನ್ನು ಕರ್ನಾಟಕ ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತ್ಯ ಚಿಂತಕ ಸಾಧಕರಾದ ಕದ್ರಿ ನವನೀತ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ದಂತವೈದ್ಯ
ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ದುರ್ಗ ಗ್ರಾಮದ ಮುಂಡ್ಲಿ ಬಲ್ಮೆಗುಂಡಿಯಲ್ಲಿ ನಿರ್ಮಾಣಗೊಂಡಿರುವ ಕಿಂಡಿಅಣೆಕಟ್ಟಿಗೆ ಅಳವಡಿಸಿದ ಸ್ವಯಂ ಚಾಲಿತ ಗೇಟ್ ನ್ನು ತೆರವು ಗೊಳಿಸಿರುವುದರಿಂದ ಮಳೆ ನೀರು ಹೊರ ಹರಿದು ಹೋಗಿರುವುದರಿಂದ ಕಳೆದ ಕೆಲ ವರ್ಷಗಳಿಂದ ಇದೇ ಪರಿಸರದಲ್ಲಿ ಎದುರಾಗುತ್ತಿದ್ದ ಕೃತಕ ನೆರೆಗೆ ಮುಕ್ತಿ ದೊರೆತ್ತಿದೆ. ನಗರ ಪ್ರದೇಶಕ್ಕೆ ಕುಡಿಯುವ ನೀರು ಮುಂಡ್ಲಿಯ ಸ್ವರ್ಣ ನದಿಯಿಂದ ಕಾರ್ಕಳ


















