ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಬೈಕಂಪಾಡಿ ಅವರ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟ ರಾಜ್ಯವು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಆ ಹಿನ್ನೆಲೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ
ಬೆಂಗಳೂರು: ಇತಿಹಾಸದ ನೈಜ ಚಿತ್ರಣವನ್ನು ಕಟ್ಟಿಕೊಡುವ ಅಗತ್ಯ ಹಿಂದೆಂದಿಗಿಂತ ಇದೀಗ ಹೆಚ್ಚಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಹೇಳಿದ್ದಾರೆ. ಕನಕಪುರ ರಸ್ತೆಯ ಕಾನ್ಷಿ ಫೌಂಡೇಷನ್ ಆವರಣದಲ್ಲಿಂದು ಲೇಖಕಿ, ಸಂಶೋಧಕಿ, ಇತಿಹಾಸಕಾರ್ತಿ ವಿಜಯಾ ಮಹೇಶ್ ಅವರ ನಾಲ್ಕಡಿ ಭಾಷಣಗಳ ಸಂಗ್ರಹ, ನೆಲದ ಮಾತು, ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದು ಏಕೆ?, ಅಂಬೇಡ್ಕರ್ ಮತ್ತು ಗಾಂಧಿ ಮುಖಾಮುಖಿ ಪುಸ್ತಕಗಳನ್ನು ರಾಜ್ಯಸಭಾ
ಹರೇಕಳ ಹಾಜಬ್ಬ ಅವರು ಕಟ್ಟಿ ಬೆಳೆಸಿದ ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಯಜಮಾನನಿಗೆ ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು ನೋಡಿ ಸಂಭ್ರಮಿಸಿದರು. ಶಾಲಾ ವಿದ್ಯಾರ್ಥಿ ಗಳಿಗೆ ಹರೇಕಳ ಹಾಜಬ್ಬನವರು ಪದ್ಮಶ್ರೀ ಪುರಸ್ಕಾರ
ಕಡಬ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ನಮ್ಮ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು ೧೦೦ ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ೨೦೦ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ರೂ. ೧ ಕೋಟಿ ಅನುದಾನ ಇಡಲಾಗಿದೆ ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಸೋಮವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿದರು.
ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸೋಮವಾರ ಸಾಯಂಕಾಲ ಬೇಟಿ ನೀಡಿದರು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯನಿರ್ವಹಣಾ ಅಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ,
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಯಿತು. ಗ್ರಾಮೀಣ
ಉಜಿರೆಯಲ್ಲಿ ಜ.8,9 ರಂದು ಎರಡು ದಿನಗಳ ಕಾಲ ನಡೆಯಲಿರುವ ಅಖಿಲಭಾರತ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಮೂರನೇ ರಾಜ್ಯ ಸಮ್ಮೇಳನದ ಕುರಿತಾಗಿ ಪೂರ್ವ ತಯಾರಿ ಸಭೆ ಇತ್ತೀಚೆಗೆ ಉಜಿರೆ ಶಾರದ ಮಂಟಪದಲ್ಲಿ ನಡೆಯಿತು.ಅಖಿಲಭಾರತ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಈ ಸಂದರ್ಭ ಮಾತನಾಡಿ ಉಜಿರೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ರಾಜ್ಯದಾದ್ಯಂತ ಅತೀ ಹೆಚ್ಚು ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಲು ಆಸಕ್ತರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ
ಕೊರೊನಾ ಆತಂಕ ಮರೆಯಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಮೊಳಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಂಗನವಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಇಂದು ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಂಗನವಾಡಿ ಶಾಲೆಯ ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
AJAY KAUSHIK NORONHA has completed Ph.D from Srinivas university in Mechanical Engineering with topic “A STUDY ONIMPLEMENTATION OF LEAN SIX SIGMA STRATEGY IN DENTAL COLLEGE HOSPITAL” under the guidance of Dr Suma Bhat of Srinivas University and Dr Shreeranga Bhat of St Joseph Engineering College Mangalore