ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಸಮಾಜ ಸೇವಕ ಐಕಳ ಹರೀಶ್ ಶೆಟ್ಟಿ ಅವರು ದಿವಂಗತ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವಂಬರ್ 7 ರಂದು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರು ಬಂಟರ ಸಂಘದ ಆಶ್ರಯದಲ್ಲಿ ವಿಜಯ ನಗರದಲ್ಲಿರುವ ಶ್ರೀಮತಿ ರಾಧಾ ಭಾಯಿ ತಿಮ್ಮಪ್ಪ ಭಂಡಾರಿ ಸಭಾ ಭವನದಲ್ಲಿ ದೀಪಾವಳಿ ಸಡಗರ ಕಾರ್ಯಕ್ರಮದಲ್ಲಿ
ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆ ಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು ಸಿಪಿಐಎಂ ದ.ಕ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು. ಅವರು ನಗರದ ಬಜಾಲ್ ನ ಭಗತ್ ಸಿಂಗ್ ಭವನದಲ್ಲಿ ಜರುಗಿದ 23ನೇ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಮ್ಯಾಂಚೆಸ್ಟರ್ ಹಾಗೂ ಬರ್ಮಿಂಗ್ಹ್ಯಾಮ್ ನಗರಗಳಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದ ಅಂಗವಾಗಿ ನಡೆದ ಸಭೆಯಲ್ಲಿ ಕರ್ನಾಟಕ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉಪಸ್ಥತರಿದ್ದರು.ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಪ್ರಧಾನ ವ್ಯವಸ್ಥಾಪಕರಾದ ಯುವರಾಜ್, ಸ್ಕೃವೇ ಮನು
ಚಿನ್ನ ಮತ್ತು ವಜ್ರಾಭರಣಗಳಿಗೆ ಪ್ರಸಿದ್ಧಿಯನ್ನು ಪಡೆದಿರುವ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ನ ಹೊಸ ಮಳಿಗೆ ನವಂಬರ್ 8ರಂದು ನಗರದ ಲೇಡಿಹಿಲ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಳ್ಳಲಿದೆ. 1947ರಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾದ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ಚಿನ್ನಾಭರಣ ಮಳಿಗೆ ಕೇವಲ ಕರಾವಳಿಯಲ್ಲಿ ಮಾತ್ರವಲ್ಲ ನೆರೆಹೊರೆಯ ಜಿಲ್ಲೆಯವರಿಗೂ ಚಿರಪರಿಚಿತವಾಗಿದೆ. ಆಭರಣಗಳ ಸುಂದರ ವಿನ್ಯಾಸ ಮತ್ತು ಕಸೂತಿ ಕೌಶಲದಿಂದ ಗ್ರಾಹಕರನ್ನು ಆಕರ್ಷಿಸುತ್ತಿದೆ. ಈ
ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.
ನಾಡಿನ ಪ್ರಸಿದ್ಧ ಸಂಸ್ಥೆಯಾಗಿರುವ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಶಿಬರೂರು ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ 3.30ಕ್ಕೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಅ.29ರಂದು ಬಿಜೈನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಓರ್ವ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮಂಗಳೂರಿನಲ್ಲಿ ಟೈಲರಿಂಗ್ ವಸ್ತುಗಳ ವಿತರಣೆ, ಪಟಾಕಿ ವಿತರಣೆ ಮಾಡಿಕೊಂಡಿದ್ದ
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ ದೇವಸ್ಥಾನದ ಆವರಣದಲ್ಲಿ ತುಪ್ಪ ದೀಪ ಅಲಂಕಾರ ಸೇವೆ ನೆರವೇರಿತು… ಈ ವಿಶೇಷ ಸೇವೆಯು ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದ್ದು ಈ ಬಾರಿಯ ಸೇವಾಕಾರ್ಯಕ್ಕೆ ಅತಿಥಿಯಾಗಳು ಸೇರಿ ಚಾಲನೆ ನೀಡಿದರು. ಈ ವೇಳೆ ದೇವಸ್ಥಾನದ ಪ್ರಧಾನ