Home Articles posted by v4news (Page 25)

ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಪುತ್ತೂರಿನಲ್ಲಿ ಶಾಸಕ ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ

ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸತಾಯಿಸಬಾರದು ಲೋಕಾಯುಕ್ತ ಉಪ ಅಧೀಕ್ಷಕ ಚೆಲುವರಾಜು ಹೇಳಿಕೆ

ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್‌ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ

ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಕೆಎಂಎಫ್ ವತಿಯಿಂದ ಶ್ರದ್ಧಾಂಜಲಿ

ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಶ್ರೀ ಪುನೀತ್ ರಾಜ್ ಕುಮಾರ್ ರವರು ದಿನಾಂಕ 29-10-2021 ರಂದು ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ ಅನುಕೂಲವಾಗುವಂತೆ ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡುವ ಮೂಲಕ

ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ : ವಾಹನ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲು

ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ರವರು ಇತ್ತೀಚೆಗೆ ರಾತ್ರಿ 8.30ರ ಸುಮಾರಿಗೆ ವಾಕಿಂಗ್ ಮುಗಿಸಿ ಬಾಳಿಗಾ ಸ್ಟೋರ್ಸ್‍ಗೆ ಸಮಾಗ್ರಿ ಖರೀದಿಗೆ ಅಂಗಡಿಯ ಮುಂಭಾಗದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‍ನಲ್ಲಿ ಬಂದ ಝೋಮಾಟೋ ಹುಡುಗ ಅವರಿಗೆ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿ ತೀರ್ವ ರಕ್ತಸ್ರಾವವಾಗಿದ್ದು ಕೂಡಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದು. ಅವರ ತಲೆಯ ಎಡಭಾಗಕ್ಕೆ ಗಾಯವಾಗಿದ್ದು. ಸದ್ಯ ಕೋಮಾ

ಗಂಭೀರ ಸ್ಥಿತಿಯಲ್ಲಿರುವ ಎತ್ತಿನ ಆರೈಕೆಯಲ್ಲಿ ಯುವಕರು

ಪಡುಬಿದ್ರಿ ಪೊಲೀಸರ ಕಾರ್ಯಚರಣೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳ ಪೈಕಿ ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಎತ್ತು ಒಂದನ್ಬು ಸ್ಥಳೀಯ ಹಿಂದೂ ಸಂಘಟನೆಯ ಯುವಕರು ಆರೈಕೆ ನಡೆಸಿ ಬದುಕಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಕಳೆದರೆಡು ದಿನಗಳಿಂದಲೂ ಕಾಲಿಗೆ ಗಂಭೀರ ಗಾಯಗೊಂಡು ಮಲಗಿದ್ದಲೇ ಇದ್ದ ಎತ್ತನ್ನು ಯುವಕರು ಬಹಳಷ್ಟು ಶ್ರಮ ವಹಿಸಿ ಸ್ಥಳೀಯ ಪಶು ವೈದ್ಯಾಧಿಕಾರಿಗಳ ಸಹಾಯದೊಂದಿಗೆ ಬದುಕಿಸುವ ಎಲ್ಲಾ ಪ್ರಯತ್ನಗಳನ್ನು

ಮೀನುಗಾರಿಕೆ ರೋಬೋಟಿಕ್ಸ್ ತಂತ್ರಜ್ಞಾನ : ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. `ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಶುಕ್ರವಾರ ಇಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ `ಮಂಗಳೂರು

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯಗಳ ರಾಶಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸ್ಥಳೀಯ ಜನತೆ

ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ ರೋಗದ ಭೀತಿಯು ಎದುರಾಗಿದೆ. ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿರುವ ಮಧ್ಯೆ ಸ್ಕೂಟರಿನಲ್ಲಿ ತಂದು ತ್ಯಾಜ್ಯ ಬಿಸಾಕಿದವನ ಮಾಹಿತಿಯನ್ನು ಸ್ಥಳೀಯರೊಬ್ಬರು ಮಾಜಿ ಮಂಜೇಶ್ವರ

ನಟ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ || Puneeth Rajkumar

ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‍ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‍ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ

ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗ

ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ ಕೃಷಿಯಿಂದ ಹಿಂದೆ ಸರಿಯಲು ಮುಂದಾಗುತ್ತಿದ್ದಾರೆ. ಈಗಾಗಲೇ ಅಡಿಕೆ ಗಿಡಗಳಲ್ಲಿ ಹಳದಿ ರೋಗ ಕಂಡು

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ