Home Articles posted by v4news (Page 28)

ಇಂದಿನಿಂದ ಹಾಸನಾಂಬೆ ದೇವಿ ದರ್ಶನ : 2 ಡೋಸ್ ಲಸಿಕೆ ಕಡ್ಡಾಯ

ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ

ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ : ಕುದ್ಕಾಡಿ ನಾರಾಯಣ ರೈ ಕಸ್ಟಡಿಯಿಂದ ಆಸ್ಪತ್ರೆಗೆ ದಾಖಲು

ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣರಾದ ಆರೋಪ ಎದುರಿಸುತ್ತಿರುವ ಕುದ್ಕಾಡಿ ನಾರಾಯಣ ರೈಯವರನ್ನು ವಿಚಾರಣೆಗಾಗಿ ಪುತ್ತೂರು ಸೆಷೆನ್ಸ್ ನ್ಯಾಯಾಲಯ ಎರಡು ದಿನ ಪೊಲೀಸ್ರ ವಶಕ್ಕೆ ಒಪ್ಪಿಸಿ ಆದೇಶಿಸಿತ್ತು. ಆದೇಶದ ಬೆನ್ನಲ್ಲೆ ಅನಾರೋಗ್ಯದ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬುಧವಾರ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.ಅರ್ಚಕರು ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ದೇವಳದ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಮುಂದಿನ ವರ್ಷ ನಡೆಯಲಿರುವ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ವಿಜ್ಞಾಪನ ಪತ್ರವನ್ನು ಶಾಸಕ ಹರೀಶ್ ಪೂಂಜಾ ಬಿಡುಗಡೆ ಮಾಡಿದರು. ನೂಜಿಬಾಳ್ತಿಲ

ಅಕ್ರಮವಾಗಿ ಸಾಗಿಸುತ್ತಿದ್ದ  ಜಾನುವಾರು ಪತ್ತೆ:ಇಬ್ಬರು ವಶಕ್ಕೆ

ಪೈಶಾಚಿಕ ಕೃತ್ಯವೊಂದರಲ್ಲಿ ವ್ಯವಸ್ಥಿತ ರೀತಿಯಲ್ಲಿ ಟ್ರಕ್ ನಲ್ಲಿ ಕೋಣ, ಎತ್ತು, ಎಮ್ಮೆ ಹೀಗೆ ಹದಿನೇಳು ಜಾನುವಾರುಗಳನ್ನು ಅಡ್ಡಾದಿಡ್ಡಿಯಾಗಿ ತುಂಬಿಸಿಕೊಂಡು ಬರುತ್ತಿರುವ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಗೇಟ್ ಬಳಿ ತಡೆದು ನಿಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇದರಲ್ಲಿ ಒಂದು ಎತ್ತು ಸಾವನ್ನಪ್ಪಿದ್ದರೆ, ಮತ್ತೊಂದು ಸಾವಿನಂಚಿನಲ್ಲಿದೆ. ಇನ್ನೊಂದು ಕಾರ್ಯಚರಣೆಯ ಸಂದರ್ಭ ಪರಾರಿಯಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ

ಮಡಪ್ಪಾಡಿ,ಕೊಂಬಾರು ಶಾಲಾ ಮಕ್ಕಳಿಗೆ ವಿತರಿಸಲು ಪುಸ್ತಕ ಹಸ್ತಾಂತರ 

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ ಮತ್ತು ಕಡಬ ತಾಲೂಕಿನ ಕೊಂಬಾರು ಸರಕಾರಿ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ ತನ್ನ ಸಿಎಸ್‍ಆರ್ ಯೋಜನೆಯಡಿ ನೋಟ್ ಪುಸ್ತಕಗಳನ್ನು ಒದಗಿಸಲಾಗಿದೆ. ಶಾಲಾ ಮಕ್ಕಳಿಗೆ ವಿತರಿಸಲು ನೋಟ್ ಪುಸ್ತಕಗಳನ್ನು ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ

ಪತ್ರಕರ್ತರ ನಗರ ವಾಸ್ತವ್ಯಕ್ಕೆ ಪಾಲಿಕೆಯಿಂದ ಸಹಕಾರ: ಅಕ್ಷಿ ಶ್ರೀಧರ್

ಮಂಗಳೂರು:  ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಲಾದ ಕಡಬ ತಾಲೂಕಿನ ಕೊಂಬಾರು, ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ

ತೊಕ್ಕೊಟ್ಟು ಫ್ಲೈಓವರ್‌ನಿಂದ ಕೆಳಬಿದ್ದ ಬುಲೆಟ್ ಸವಾರ ಸಾವು

ಉಳ್ಳಾಲ: ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಸಾವನ್ನಪ್ಪಿದವರು. ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್ ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯ

 ದಲಿತ ಬಾಲಕಿ ಅತ್ಯಾಚಾರ ಪ್ರಕರಣ –ನ್ಯಾಯಾಲಯಕ್ಕೆ ಶರಣಾದ ಕುದ್ಕಾಡಿ ನಾರಾಯಣ ರೈ

ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಯವರು ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ.ನಾರಾಯಣ ರೈ ಯವರು ತನ್ನ ಪರ ವಕೀಲರಾದ ಮಹೇಶ್ ಕಜೆಯವರ ಜತೆ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಶರಣರಾದರು. ಬಡಗನ್ನೂರಿನ 17ರ ಹರೆಯದ ಅಪ್ರಾಪ್ತ ದಲಿತ ಸಮುದಾಯದ ಬಾಲಕಿಯು ಸೆ.5 ರಂದು ಮಗುವಿಗೆ ಜನ್ಮ

ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ರಾಡ್ ಹಾಗೂ ಟೈಲ್ಸ್‍ನಿಂದ ಹಲ್ಲೆ

ಮಂಜೇಶ್ವರ: ಆವರಣ ಗೋಡೆಯನ್ನು ಕಬಳಿಸಿ ಮನೆ ಸಮೀಪದ ರೋಯಲ್ ಆರ್ಕೆಡ್ ಭಾವ ಹಿಂದೂಸ್ಥಾನಿ ಕಟ್ಟಡಕ್ಕೆ ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅಲ್ಲಿದ್ದ ತಂಡ ತಂದೆ ಹಾಗೂ ಅಪ್ರಾಪ್ತ ಬಾಲಕನಿಗೆ ರಾಡ್ ಹಾಗೂ ಟೈಲ್ಸ್ ತುಂಡುಗಳಿಂದ ಹಲೆಗೈದ ಘಟನೆ ನಡೆದಿದೆ. ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ವಾಸವಾಗಿರುವ ಅಬ್ದುಲ್ ರಶೀದ್ (46) ಹಾಗೂ ಪುತ್ರ ರಾಯಿಫ್ (16) ಹಲ್ಲೆಗೊಳಗಾಗಿದ್ದಾರೆ. ಇವರನ್ನು ಬಳಿಕ ಕುಂಬಳೆ ಸಹಕಾರಿ ಆಸ್ಪತ್ರೆಯಲ್ಲಿ

ಪುತ್ತಿಗೆ ಗ್ರಾಮಸಭೆ: ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಗ್ರಾಮಸ್ಥರಿಂದ ಆಗ್ರಹ

 ಮೂಡುಬಿದಿರೆ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಒಂದೇ ಗ್ರಾಮದಲ್ಲಿ ಎರಡೆರಡು ಶಾಲೆಗಳು ಇರುವುದರಿಂದ ಮಕ್ಕಳು ಹಂಚಿ ಹೋಗುತ್ತಾರೆ. ಅಲ್ಲದೆ ಶಿಕ್ಷಕರ ಕೊರತೆಯೂ ಇದೆ. ಇದನ್ನೆಲ್ಲಾ ತಪ್ಪಿಸಲು ಗ್ರಾಮದಲ್ಲಿ ಒಂದೇ ಶಾಲೆಗೆ ಅವಕಾಶ ನೀಡಿ ಆಗ ಸುಲಭವಾಗುತ್ತದೆ ಎಂದು ಗ್ರಾಮ ಪಂಚಾಯತ್‍ನ ಮಾಜಿ ಸದಸ್ಯ ನಾಗವರ್ಮ ಜೈನ್ ಸಲಹೆ ನೀಡಿದರು ಅವರು ಪುತ್ತಿಗೆ ಪಂಚಾಯತ್ ಸಮುದಾಯ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪುತ್ತಿಗೆ