Home Articles posted by v4news (Page 29)

ಮುಷ್ಕರದಿಂದ ಹಿಂದೆ ಸರಿದ ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಸದಸ್ಯರು

ಪುತ್ತೂರು: ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ಸೌಲಭ್ಯ ಪಾವತಿ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಕೆಎಸ್‍ಆರ್‍ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಅಮರಣಾಂತ ಉಪವಾಸ ನಿರತರಾಗಿದ್ದ ಪುತ್ತೂರು ವಿಭಾಗ ಕೆಎಸ್‍ಆರ್‍ಟಿಸಿ ಮಜ್ದೂರ್ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮಂಗಳವಾರ ರಾತ್ರಿ ನಡೆಸಿದ ಮಾತುಕತೆ ಪರಿಣಾಮ

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ

ಎಚ್.ಆರ್.ನೋಂದಾಣಿ ಸಂಖ್ಯೆಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಕೇರಳಕ್ಕೆ ಇದನ್ನು ಸಾಗಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕೇರಳ ಮೂಲದ ಲಾರಿ ಕ್ಲಿನರ್ ಪೊಲೀಸ್ ವಶದಲ್ಲಿದ್ದಾರೆ. ಲಾರಿಯಲ್ಲಿ ಅಡ್ಡಾದಿಡ್ಡಿಯಾಗಿ

ಉಪ್ಪಿನಂಗಡಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ

ಲೈಂಗಿಕ ಕಿರುಕುಳ ಆರೋಪ :ಎಲ್ಯಾಸ್ ಪಿಂಟೋಗೆ ನ್ಯಾಯಾಂಗ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ

ಹಾನಗಲ್ ಉಪ ಚುನಾವಣೆ : ಬಿಜೆಪಿ ಪರವಾಗಿ ಎಂ.ಅಪ್ಪಣ್ಣ ಬಿರುಸಿನ ಪ್ರಚಾರ

ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು ಬಿರುಸಿನ ಪ್ರಚಾರ ನಡೆಸಿದರು. ಈ ಹಿಂದೆ ಬಿ‌.ಎಸ್.ಯಡಿಯೂರಪ್ಪನವರು ಹಿಂದುಳಿದ ಸಮಾಜಡಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು ಅದೇ ಹಾದಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ವಿಶೇಷ

ಹಾನಗಲ್ ಕ್ಷೇತ್ರದಲ್ಲಿ ಮಾಜಿ‌ ಸಚಿವ ರಮೇಶ್ ಜಾರಕಿಹೋಳಿ‌ ಬಿರುಸಿನ ಪ್ರಚಾರ

ಉಪ ಚುನಾವಣಾ ನಡೆಯುತ್ತಿರುವ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ‌ಅಭ್ಯರ್ಥಿ ಪರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಸೋಮವಾರದಿಂದ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಬ್ಲಾಕ್ , ವಾರ್ಡ್ ಗಳಿಗೂ ಪಾದಯಾತ್ರೆ ಮೂಲಕ ತೆರಲಿ ರಮೇಶ್ ಜಾರಕಿಹೋಳಿ ಮತ ಯಾಚನೆ‌ ನಡೆಸುತ್ತಿದ್ದಾರೆ.ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿಯಾಗುತ್ತಿರುವ ರಮೇಶ್ ಜಾರಕಿಹೋಳಿ ಅವರು ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಕೊನೆಯ ಹಂತದ ಪ್ರಚಾರ

ಮುರತ್ತಣೆಯಲ್ಲಿ ಹದಗೆಟ್ಟ ಹೈಮಾಸ್ಟ್ ದೀಪ

ಮಂಜೇಶ್ವರ : ವರ್ಕಾಡಿ ಪಂಚಾಯತ್‍ನ ಪ್ರಮುಖ ಪೇಟೆಯಲ್ಲೊಂದಾದ ಮುರತ್ತಣೆಯಲ್ಲಿ ದಿವಂಗತ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ನಿಧಿಯಿಂದ ಸ್ಥಾಪಿಸಲಾದ ಹೈ ಮಾಸ್ಟ್ ಲೈಟ್ ಹದೆಗೆಟ್ಟು ವರ್ಷಗಳಾದರೂ ದುರಸ್ಥಿಗೆ ವರ್ಕಾಡಿ ಪಂಚಾಯತ್ ಆಡಳಿತ ಸಮಿತಿ ಮೀನ ಮೇಷ ಎಣಿಸುತ್ತಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಪಂಚಾಯತ್ ಆಡಳಿತ ಸಮಿತಿಯ ಗಮನಕ್ಕೆ ತಂದರೆ ಬೇಜವಾಬ್ದಾರಿಯುತವಾದ ಹೇಳಿಕೆ ನೀಡಿ ಕೈ ತೊಳೆಯುತ್ತಿದೆಯೆಂದು ಯೂತ್ ಕಾಂಗ್ರೆಸ್ ಆರೋಪಿಸಿದೆ. ಲೈಟ್ ಉರಿಯದಿರುವುದರಿಂದಾಗಿ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟ : ಕರ್ನಾಟಕ ತಂಡ ಆಯ್ಕೆ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಭರತೇಶ್ ಗೌಡ ಮೈರೋಳ್ತಡ್ಕ ಅವರು ಆಯ್ಕೆಯಾಗಿದ್ದಾರೆ. ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದೆ. ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿ, ಬೆಳ್ತಂಗಡಿ ವಾಣಿಜ್ಯ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ ಪಿ.ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ

ಕಡಬ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಎಡಮಂಗಳ ಸಮೀಪ  ಸಂಭವಿಸಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ ಚಲಿಸಿದ ವೇಳೆ ಸಮಸ್ಯೆಯು ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು