ಉಳ್ಳಾಲ: ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ
ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ
ಬೈಕಂಪಾಡಿಯ ಪ್ರದೇಶದಲ್ಲಿರುವ ಕರ್ಕೇರ ಮೂಲಸ್ಥಾನದಲ್ಲಿ ನಾಗನ ಕಟ್ಟೆಗೆ ಹಾನಿ ಮಾಡಿದ್ದಲ್ಲದೆ, ಕಾಣಿಕೆ ಹುಂಡಿ, ಮೂಲಸ್ಥಾನದ ಕಚೇರಿಯಲ್ಲಿದ್ದ ಕಪಾಟು ಹಾಗೂ ನಂದಿ ವಿಗ್ರಹವನ್ನೂ ಪುಡಿಗೈದ ಕಿಡಿಗೇಡಿಗಳು, ಇನ್ನು ಅಲ್ಲೆ ಇದ್ದ ಶಿವಲಿಂಗ ಮೂರ್ತಿಯೊಂದು ನಾಪತ್ತೆಯಾದ ಘಟನೆ ನಡೆದಿದೆ. ಇಂದು ಬೆಳಗ್ಗೆ ಕರ್ಕೇರ ಮೂಲಸ್ಥಾನದ ಗುರಿಕಾರರು ಸಂಕ್ರಮಣ ಪೂಜೆಗೆಂದು ನಾಗದೇವರ ಕಟ್ಟೆ ಬಳಿ ತೆರಳಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕರ್ಕೇರ ಮೂಲಸ್ಥಾನದ
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಮಗುವನ್ನು ಕರುಣಿಸಿದ ಪ್ರಕರಣದ ಆರೋಪಿ ಆರ್‌ಎಸ್‌ಎಸ್ ಮುಖಂಡ ನಾರಾಯಣ ರೈ ಬಂಧನಕ್ಕೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ಅಶೋಕ್ ಕೊಂಚಾಡಿ ಅವರು, ದಲಿತ ಸಮುದಾಯದ ಬಾಲಕಿಗೆ ಆದ ಅನ್ಯಾಯದ ವಿರುದ್ಧ ಮಾತನಾಡದ ಜಿಲ್ಲಾ ಉಸ್ತುವಾರಿ
ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು. ಈ ಸಂದರ್ಭ
ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು ಮಾಹಿತಿ ನೀಡಿದ್ದು ಅಲ್ಲಿಗೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್ ಎಂಬವರೇ ಪರ್ಸ್‌ನ್ನು ಮರಳಿಸಿದವರು ಮುಹಮ್ಮದ್ ಹನೀಫ್ ಸುಮಾರು 15 ವರ್ಷಗಳಿಂದ ನಗರದಲ್ಲಿ ಆಟೊ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದಿನಂತೆ ತನ್ನ ಕಾಯಕದಲ್ಲಿ ನಿರತನಾಗಿದ್ದ ಹನೀಫ್, ಶುಕ್ರವಾರ
ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು
ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಬಾಲಗಣಪತಿ(ಗುಡ್ಡೆ ಗಣಪತಿ) ದೇವರ ವಾರ್ಷಿಕ ಶೋಭಾಯಾತ್ರೆಗೆ ಕ್ಷಣ ಗಣನೆ ಆರಂಭಗೊಂಡಿದೆ. ಗಣೇಶ ಚೌತಿಯ ದಿನದಂದ್ದು ಪ್ರತಿಷ್ಠಾಪನೆಗೊಂಡು ನವರಾತ್ರಿ ಸಂದರ್ಭ ತಾಯಿ ಶಾರದೆಯ ಒಂಭತ್ತು ದಿನಗಳ ಭವ್ಯ ಪೂಜಾ ಕೈಂಕರ್ಯಗಳನ್ನು ವೀಕ್ಷಿಸಿ ಎಲ್ಲಾ ಕಡೆಗಳಲ್ಲೂ ಶಾರದೆ ವಿಸರ್ಜನಾ ಕಾರ್ಯಕ್ರಮ ನಡೆದರೆ ಇಲ್ಲಿ ಮಾತ್ರ ಬಾಲಗಣೇಶನ ವಿಸರ್ಜನಾ ಮೆರವಣಿಗೆ ನಡೆಯುತ್ತಿದೆ. ಈ ಪುಣ್ಯಕ್ಷೇತ್ರದ ವಿಶೇಷತೆ ಏನೆಂದರೆ ಇಂದು ಬೃಹತ್ ಕಟ್ಟಡ ಹೊಂದಿದ