Home Articles posted by v4news (Page 39)

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ

ಕಡಬದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ವಸ್ತುಗಳು ಬೆಂಕಿ ತಗುಲಿ ಹಾನಿಗೊಳಗಾಗಿದೆ. ಕೊಠಡಿಯಲ್ಲಿದ್ದ ಮೂರು ಕ್ವೀಂಟಾಲ್ ಗೂ ಅಧಿಕ ರಬ್ಬರ್, ಒಂದು ಸಾವಿರ ತೆಂಗು, ಅಡಿಕೆ, ಕರಿ ಮೆಣಸು, ಪೈಪ್, ಇತರೆ ಸಾಮಾಗ್ರಿಗಳು

ಕಾಪು ಮಾರಿಗುಡಿ ದೇವಸ್ಥಾನದಲ್ಲಿ ಮಹಾಚಂಡಿಕಾಯಾಗ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ಚಂಡಿಕಾಯಾಗ, ಪೂರ್ಣಾಹುತಿಯೊಂದಿಗೆ ಸುವಾಸಿನಿ ಪೂಜೆ, ನವಗ್ರಹ ಪೂಜೆ ಹಾಗೂ ವಿಷ್ಣು ಪೂಜೆ

ಕಾಂಗ್ರೆಸ್‌ನ ಭ್ರಷ್ಟಾಚಾರ, ಕರ್ಮಕಾಂಡ ಬೆಳಕಿಗೆ ಬಂದಿದೆ: ನಳಿನ್ ವ್ಯಂಗ್ಯ

ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಕಾಂಗ್ರೆಸ್ ನವರು ಕಲೆಕ್ಷನ್ ಗಿರಾಕಿಗಳು ಅಂತ ನಾವು ಹೇಳಿಲ್ಲ, ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಬಹಳ ಕೀಳಾಗಿ ಕಲೆಕ್ಷನ್ ಗಿರಾಕಿ, ಹಫ್ತಾ ವಸೂಲಿ, ಭ್ರಷ್ಟಾಚಾರ ಎಲ್ಲಾ ಹೊರಗೆ ಹಾಕಿದ್ದಾರೆ. ಅವರ ಹುಡುಗರಲ್ಲೇ ಐನೂರು ಕೋಟಿ ಇದೆ ಅಂತ ಹೇಳಿದ್ದಾರೆ. ಈ ಬಗ್ಗೆ

ಬಂಟ್ವಾಳ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿ

ಬಂಟ್ವಾಳ: ಮಂಗಳವಾರ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿ ಉಂಟಾಗಿ ನಷ್ಟ ಸಂಭವಿಸಿದೆ. ಅರಳ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ತಡೆಗೋಡೆ ಕುಸಿದು ಬಿದ್ದು ಜನಹಿತಾಯ ವಿದ್ಯಾಸಂಸ್ಥೆಗೆ ಸೇರಿದ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಎಂಬಲ್ಲಿ ಲೀಲಾ ಸಂಜೀವ ಪೂಜಾರಿಯವರ ಮನೆ ಸಮೀಪದ ಗುಡ್ಡ ಜರಿದು ಬಿದ್ದು ಮನೆಯ ಸುತ್ತ ಆವರಿಸಿಕೊಂಡಿದೆ. ಅರಳ ಗ್ರಾಮದ ಸುಂದರ ಎಂಬವರ ಮನೆಯ ಮೇಲೆ ಆವರಣ ಗೋಡೆ ಕುಸಿದು

ಅದಮಾರು ಪದವಿ ಕಾಲೇಜಿಗೆ ಸಿಎಂ ಅವರಿಂದ ಶಿಲಾನ್ಯಾಸ

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ಹಾನಗಲ್ ಉಪಚುನಾವಣೆಗೆ ಉಸ್ತುವಾರಿಯಾಗಿ ಎಂ ಎಲ್ ಸಿ ಹರೀಶ್ ಕುಮಾರ್ ನೇಮಕ

ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ.