ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ
ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ ಬಹಳಷ್ಟು ಜನರು ಪ್ರವಾದಿಯವರನ್ನು ಅರಿತಾಗ ಇಸ್ಲಾಂ ಸ್ವೀಕರಿಸಿದ ಚರಿತ್ರೆಯಿದೆ. ಪ್ರವಾದಿಯನ್ನು
ಯುವತಲೆಮಾರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥೈಸಿಕೊಂಡು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮತದಾರರ ಸಾಕ್ಷರತಾ ಸಂಘದ ಬೆಳ್ತಂಗಡಿ ತಾಲೂಕು ನೋಡಲ್ ಅಧಿಕಾರಿ ಶುಭಾ ಪೌಲ್ ಹೇಳಿದರು. ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನೈತಿಕಪ್ರಜ್ಞೆಯಿಂದ ಮತವನ್ನು ಚಲಾಯಿಸುವ ಮೂಲಕ ಜವಾಬ್ದಾರಿಯುತ ನಾಯಕನನ್ನು ಆಯ್ಕೆ
ಉಜಿರೆ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಛಲ ಎನ್ನುವುದು ಮುಖ್ಯ. ಛಲ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸಾಧಿಸಲು ಸಾಧ್ಯ ಎಂದು ಎಸ್.ಡಿ.ಎಂ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಮ್ಮ ವ್ಯಕ್ತಿತ್ವ ವಿಕಸನದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು.
ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಒಟ್ಟಾರೆ ಪ್ರಕರಣ ಸುಖ್ಯಾಂತ್ಯ ಕಂಡಿದೆ.
A visit to PilikulaNisargadhama Mudushedde – Post, Mangalore – 575028, D.K (District) Karnataka was organized by the College of Aviation Studies, Srinivas University for the Second-yearBBA Aviation students on Saturday, 9th October 2021. The team of Sixty-Eightstudents and four faculties visited Pilikula Nisargadhama,Swami Vivekananda Planetarium and Heritage Village
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ
ಶಿರ್ವದ ನಡಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೀನಿಗೆ ಗಾಳ ಹಾಕಲು ಹೋಗಿ ಹೊಳೆಗೆ ಬಿದ್ದು ನಾಪತ್ತೆಯಾದ ಯುವಕನ ಶವ ಪತ್ತೆಯಾಗಿದೆ. ದಿಲೀಪ್ ಪಾಣಾರ (30) ಮೃತ ವ್ಯಕ್ತಿ ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ತನ್ನ ಸಹಪಾಠಿಗಳೊಂದಿಗೆ ಭಾನುವಾರ ಹೊಳೆಗೆ ಮೀನು ಹಿಡಿಯಲು ಹೋಗಿದ್ದ ಈತ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ, ಸಂಜೆಯವರೆಗೂ ಈತನ ಪತ್ತೆಗಾಗಿ ಹುಡುಕಾಟ ನಡೆಸಿದರಾದರೂ ಕತ್ತಲಾವರಿಸಿದ್ದರಿ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಮತ್ತೆ
ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ
ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ