Home Articles posted by v4news (Page 49)

ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ: ಕಾಂಗ್ರೆಸ್ ಮುಖಂಡರ ಜಂಟಿ ಸುದ್ದಿಗೋಷ್ಟಿ

ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾದ-ವಿವಾದ

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ: ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಲು ಇದೊಂದು ಉತ್ತಮ ಕಾರ್ಯಕ್ರಮ. ಬಹಳ ಅದ್ಭುತವಾಗಿ ಸ್ಮಾರ್ಟ್ ಸಿಟಿಯಿಂದ

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಮಂಗಳೂರು ವಿವಿ ಕುಲಪತಿ ತಂಡ ಚಾಂಪಿಯನ್

ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್ ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ಗೆ ’ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’

ಮಂಗಳೂರು: ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸೊಸೈಟಿ ಬೆಂಗಳೂರು ಹಾಗೂ ಜ್ಞಾನ ಮಂದಾರ ಟ್ರಸ್ಟ್ (ರಿ) ಬೆಂಗಳೂರು ಇದರ ನೇತೃತ್ವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಕ್ರೀಡಾ ಬರವಣಿಗೆಗಾಗಿ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಪ್ರತಿಷ್ಠಿತ ’ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’ಗೆ ಪಾತ್ರರಾಗಿದ್ದಾರೆ. ಜಗದೀಶ್ಚಂದ್ರ ಅಂಚನ್ ಸುಮಾರು 30 ವರ್ಷಗಳಿಂದ ಕ್ರೀಡಾ ಅಂಕಣ ಹಾಗೂ ಕ್ರೀಡಾ ಲೇಖನಗಳ ಮೂಲಕ ರಾಜ್ಯ, ಅಂತರ್

ಸಮುದ್ರಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮಂಗಳೂರಿನ ಪಣಂಬೂರು  ಬೀಚಿನಲ್ಲಿ  ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.   ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು  ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು.  ಸಂಜೆಯ ವೇಳೆಗೆ ಪಣಂಬೂರು ಬೀಚಿಗೆ ಬಂದಿದ್ದು ಸಮುದ್ರಕ್ಕೆ ಇಳಿದಿದ್ದರು. ಕೆಲ ಹೊತ್ತಿನಲ್ಲಿ ಸಮುದ್ರದ ಸೆಳೆತಕ್ಕೆ ಇವರು ಸಿಲುಕಿಕೊಂಡು ಅಪಾಯಕ್ಕೆ

ಮೂಡುಬಿದಿರೆ ಸಂಸ್ಕೃತ ಗುರು ಅನಂತ ಜೋಷಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ ಜೋಷಿ(81) ಅವರು ಪಾರ್ಶ್ವಕೀರ್ತಿ ಅತಿಥಿಗೃಹದಲ್ಲಿ  ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ರಮಾರಾಣಿ ಶೋದ ಸಂಸ್ಥಾನದಲ್ಲಿ ಸಂಸ್ಕೃತ ಪಾಠ ಬೋಧಿಸುತ್ತದ್ದರು. ಬನಾರಸ್ ಬೈದನಿಘಾಟ್ ನಲ್ಲಿ ಸುಮಾರು 30 ವರ್ಷ ಮೊದಲು ಮೂಡುಬಿದಿರೆ ಭಟ್ಟಾರಕಶ್ರೀ ಅವರಿಗೆ

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ

ಸಿಂಧಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ

ಬೀಚ್ ಫ್ರೆಂಡ್ಸ್ ಹೆಜಮಾಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೀಚ್ ಫ್ರೆಂಡ್ಸ್,(ರಿ) ಹೆಜಮಾಡಿ ಇದರ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಯವರ ಜನ್ಮದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ ಅಮಿತ್ ಕುಮಾರ್ ನೇತ್ರತ್ವದಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಯಿತು. ಸರ್ವಸದಸ್ಯರು ಶ್ರೀ ಶನೀಶ್ವರ ಮಂಡಳಿ ಪರಿಸರ ಮತ್ತು ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.