Home Articles posted by v4news (Page 52)

ಧ್ವನಿ ವರ್ಧಕ ಮೂಲಕ ಶಬ್ದಮಾಲಿನ್ಯ ತಡೆಯಲು ಆಗ್ರಹ : ಅ.7ರಂದು ಪ್ರತಿಭಟನೆ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಹಿಂದೂ ದೇವಸ್ಥಾನಗಳನ್ನು ರಾತ್ರೋರಾತ್ರಿ ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಕಳೆದ 21 ವರ್ಷದ ಹಿಂದೆಯೇ ಶಬ್ದ ಮಾಲಿನ್ಯ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಾಗೂ ಇತರೆ ಮಾಧ್ಯಮ ಮೂಲಕ ಶಬ್ದ ಮಾಲಿನ್ಯ ತಡೆಯಲು ಆದೇಶಿಸಿದೆ. ಹಲವಾರು ಹೈಕೋರ್ಟ್‍ಗಳಯ ಕಟ್ಟುನಿಟ್ಟಾಗಿ ಆಜ್ಞೆ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ : ಅ.2ರಂದು ಸಂರಕ್ಷಣಾ ಅಭಿಯಾನ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಸಂಭ್ರಮೋತ್ಸವದ ಆಚರಣೆ ಸಂರಕ್ಷಣಾ ಅಭಿಯಾನವು ಆಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಗೈದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಲ್ಯಾನ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ಅಮೃತ

ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ವುಶು ಕ್ರೀಡಾಕೂಟ

ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು,

ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಅವರಿಗೆ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ

ಕಾಪು ಬ್ಲಾಕ್ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ

ಮಂಜೇಶ್ವರ ಗ್ರಾ. ಪಂ.ನಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ವಿರೋಧ : ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾ. ಪಂ. ಬೋರ್ಡ್ ಸಭೆಯಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ಆಡಳಿತ ಮಂಡಳಿ ಅಜೆಂಡಾದ ಬಗ್ಗೆ ಚರ್ಚಿಸಿ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಇರುವುದರಿಂದ ಘರಂ ಆದ ವಿರೋಧ ಪಕ್ಷದ ಯುಡಿಎಫ್ ಸದಸ್ಯರುಗಳು ಬೀಫ್ ಸ್ಟಾಲ್‍ಗಳನ್ನು ವಿರೋಧಿಸುತ್ತಿರುವುದು ಆರೆಸ್ಸಸ್ ಅಜೆಂಡಾವನ್ನು ಪ್ರಾಬಲ್ಯಕ್ಕೆ ತರುವ ಯತ್ನವಾಗಿರುವುದಾಗಿ ಆರೋಪಿಸಿ ಬೋರ್ಡ್ ಸಭೆಯನ್ನು ತ್ಯಜಿಸಿ ಹೊರ ಬಂದು ಪ್ರತಿಭಟಿಸಿದರು. ಇವರೊಂದಿಗೆ ಎಸ್ ಡಿ ಪಿ ಐ ಹಾಗೂ ಆಡಳಿತರಂಗ

ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ : ಭಗತ್‍ಸಿಂಗ್‍ರವರ 114ನೇ ಜನ್ಮದಿನಾಚರಣೆ

ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ ಯಿಂದ ಭಗತ್‍ಸಿಂಗ್‍ರವರ 114ನೇ ಜನ್ಮದಿನಾಚರಣೆ ಯನ್ನು ಆಚರಿಸಲಾಯಿತು. ಎಐಡಿವೈಒ ರಾಷ್ಟ್ರೀಯ ಅಧ್ಯಕ್ಷರಾದ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡುತ್ತಾ ಭಗತ್‍ಸಿಂಗ್ ಕಂಡ ಕನಸು ನನಸಾಗಿಸಲು ಇಂದಿನ ವಿದ್ಯಾರ್ಥಿ ಯುವಜನರು ಸಂಕಲ್ಪ ತೊಡಬೇಕು ಭಗತ್‍ಸಿಂಗ್ ಅವರು ಕನಸು ಬ್ರಿಟಿಷರು ಭಾರತ ಬಿಟ್ಟು ತೊಲಗಿದರೆ ಸಾಕಾಗುವುದಿಲ್ಲ ಒಂದು ಸಮಾಜವಾದ ರಾಷ್ಟ್ರವನ್ನು ನಿರ್ಮಾಣ ಮಾಡಬೇಕೆಂಬುವುದಾಗಿತ್ತು. ಎಲ್ಲ ಬಡಜನರಿಗೆ ಮೂಲಭೂತ ಅವಶ್ಯಕತೆಗಳು

ಉದ್ಯಮಿ ಜಾರ್ಕಳ ಅಜಿತ್ ಹೆಗ್ಡೆ ನಿಧನ

ಕಾರ್ಕಳ ತಾಲೂಕಿನ ಉದ್ಯಮಿ, ಸಾಮಾಜಿಕ ಕಾರ್ಯಕರ್ತರು ಹಾಗೂ ಕಾರ್ಕಳದ ಲತಾ ಮೆಡಿಕಲ್ಸ್‍ನ ಸ್ಥಾಪಕರಾದ ಜಾರ್ಕಳ ಅಜಿತ್ ಹೆಗ್ಡೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವು ಸೆ.30ರಂದು ಬೆಳಗ್ಗೆ 8.30ರಿಂದ 10ರ ವರೆಗೆ ಕಾರ್ಕಳದ ತೆಳ್ಳಾರ್ ರಸ್ತೆಯಲ್ಲಿರುವ ಸ್ವಗೃಹ ಕಸ್ತೂರಿಯಲ್ಲಿ ನಡೆಯಲಿದೆ. ನಂತರ ಮಧ್ಯಾಹ್ನ 12.30ಕ್ಕೆ ನಿಂಜೂರು ಪಡುಮನೆ ಎಂಬಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತುಳು ದಿನ ಆಚರಣೆ ಮತ್ತು ಪರಿಷ್ಕ್ರತ ತುಳು ಜ್ಞಾತಿಪಾದಸಂಚಯ ಡಿಜಿಟಲ್ ಆವೃತ್ತಿ ಲೋಕಾರ್ಪಣೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯವು ಗಾಂಧಿಜಯಂತಿಯ ಸಂದರ್ಭದಲ್ಲಿ ತುಳುದಿನವನ್ನು ಐಲೇಸಾ ತಂಡದ ಸಹಯೋಗದೊಂದಿಗೆ ಅಕ್ಟೋಬರ್ ೨ರಂದು ಆನ್ ಲೈನ್ ಮೂಲಕ ಆಚರಿಸಲಿದ್ದು ಇದರಲ್ಲಿ ವಿಶ್ವವಿದ್ಯಾನಿಲಯದ ಮಹತ್ ಭಾಷಾ ಯೋಜನೆಯಾದ ’ಪರಿಷ್ಕ್ರತ ತುಳು ಜ್ಞಾತಿಪದಸಂಚಯದ ಡಿಜಿಟಲ್ ಆವೃತ್ತಿಯನ್ನು ಕುಲಾಧಿಪತಿಯವರಾದ ಶ್ರೀ ಯನ್, ವಿನಯ ಹೆಗ್ಡೆಯವರು ಲೋಕಾರ್ಪಣೆ ಮಾಡಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿಯವರಾದ ಡಾ. ಎಂ. ಎಸ್ ಮೂಡಿತ್ತಾಯರು, ಕುಲಸಚಿವರಾದ ಡಾ.