ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಮಾತನಾಡಿದ ಶಾಸಕರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ
ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ
ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ಸಿಗರು ತಾಲಿಬಾನಿಗಳಿದ್ದಂತೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿ ಈ ರೀತಿ ಪ್ರತಿಕ್ರಿಯಿಸಿದರು. ಅವರ ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ, ತಾಲಿಬಾನ್ ಸಂಸ್ಕೃತಿ ಅವರದ್ದು, ಅವರು
ಹಾಸನ ತಾಲೂಕು ಕಾನೂನು ಸೇವಾ ಸಮಿತಿ ಆಲೂರು, ವಕೀಲರ ಸಂಘ ಆಲೂರು ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಲೂರು ತಾಲೂಕು ಜೆಎಂಎಫ್ಸಿ ನ್ಯಾಯಾಧೀಶರಾದ ಪ್ರತಿಮಾ ನೇತೃತ್ವದಲ್ಲಿ ಹಮ್ಮಿಕೊಂಡಿದ್ದರು. ಆಲೂರು ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಜೆಎಂಎಫ್ಸಿ ನ್ಯಾಯಾಧೀಶರಾದ ಪ್ರತಿಮಾ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ಕಾನೂನಿನ ಅರಿವಿನ
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಭಾಗದ ಮೊದಲ ಹಂತವಾಗಿ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ಸರಕಾರವು ಗುತ್ತಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ತಲಪಾಡಿಯಿಂದ ಮರಗಳ ಮಾರಣ ಹೋಮದದ ಪ್ರಕ್ರಿಯೆ ಆರಂಭಗೊಂಡಿತ್ತು. ಮರಗಳನ್ನು ಕಡಿದು ಅದರ ರೆಂಬೆಗಳನ್ನು ರಸ್ತೆ ಬದಿಗಳಲ್ಲಿ ಹಾಗೂ ಬಸ್ಸು ನಿಲ್ದಾಣ ಪರಿಸರಗಳಲ್ಲಿ ಮತ್ತು ಸಾರ್ವಜನಿಕರು ನಡೆದಾಡುತ್ತಿರುವ ಸ್ಥಳಗಳಲ್ಲಿ ಉಪೇಕ್ಷಿಸಿ ಅದನ್ನು ತೆರವುಗೊಳಿಸದೇ ಇರುವುದು
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್‍ಮೆಂಟ್‍ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ, ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳ ತಂಡ
ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ
ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ
ಕ್ಷೇತ್ರದ ಜನರಿಗೆ ಭರವಸೆ ನೀಡಿದ ನಂತರ ಆ ಕೆಲಸ ಮಾಡಿ ಗ್ರಾಮಗಳಿಗೆ ತೆರಳುತ್ತೇನೆ. ಇಲ್ಲವಾದರೇ ಆ ಗ್ರಾಮಕ್ಕೆ ನಾನು ಮರಳುವುದಿಲ್ಲ. ಆಶ್ವಾಸನೆ ನೀಡುವ ಬೇರೆ ರಾಜಕೀಯ ಮುಖಂಡರ ಹಾಗೆ ಗೊಡ್ಡು ಮಾತುಗಳನ್ನು ಹೇಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕರಾದ ಶ್ರೀಮಂತ ಪಾಟೀಲ ವಿನಾಕಾರಣ ಆಡಿಕೊಳ್ಳುವವರಿಗೆ ಟಾಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಸಂಬರಗಿ ಗ್ರಾಮದಲ್ಲಿ ವಿವಿಧ ಅಭೀವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿ
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ