Home Articles posted by v4news (Page 54)

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ- ಡಿವೈಎಫ್ಐ

ಸುರತ್ಕಲ್ ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ ಕೂಡಲೇ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಿ ಬಂಧಿಸಲು ಒತ್ತಾಯಿಸುತ್ತದೆ. ವಿದ್ಯಾರ್ಥಿಗಳು

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ : ನೀರಿನ ಬಿಲ್ ಗೊಂದಲ, ಅಸಂವಿಧಾನಿಕ ಪದ ಬಳಕೆ

ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ ಮುಖ್ಯಾಂಶಗಳು.. ಆದ್ಯತೆಯ ಕಾಮಗಾರಿ ಎಂದು ಹೇಳಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಹಣ ಮಾಡಿದ್ದು ಬಿಟ್ಟರೆ ಅಭಿವೃದ್ದಿ ಕಾರ್ಯ ಏನು ಮಾಡಿಲ್ಲ ಎಂದು ವಿಪಕ್ಷ ಸದಸ್ಯ

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ

ಕಾರ್ಕಳದ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು ವಿತರಿಸುತ್ತಿದ್ದೇವೆ. ಸಮಾಜದ ಎಲ್ಲಾರಿಗೂ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಸಿಗಲಿ ಎಂಬ ಉದ್ದೇಶದಿಂದ

ಗಿರಿಜಾ ಹೆಲ್ತ್‍ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ

ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಔಷಧ ತಜ್ಞರ

ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ

ಬಿಂದಿಯಾ ಎಲ್ ಶೆಟ್ಟಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ರಾಷ್ಟ್ರೀಯ ಸೇವಾ ಯೋಜನೆ 2019-20ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಮೊದಲಿಗೆ ಸುರತ್ಕಲ್ ಜಂಕ್ಷನ್‍ನಿಂದ ಗೊವಿಂದದಾಸ ಕಾಲೇಜಿನ ವರೆಗೆ ಮೆರವಣಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಂದಿಯಾ ಎಲ್

ಬೈಂದೂರು : ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ

ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ, ಕಾರ್ಮಿಕರ ಸಂಹಿತೆಗಳನ್ನು ವಿರೋಧಿಸಿ ನಡೆದ ಭಾರತ್ ಬಂದ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್‍ಗಿರಿ ಪ್ರಕರಣ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ