Home Articles posted by v4news (Page 57)

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ.

ಕಾರ್ಕಳದಲ್ಲಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದು, ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಕಾರ್ಕಳ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ಫುಲ್ ಕೆರಿ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಸುಶಾಂತ್ ಸುಧಾಕರ್, ಜನವಿರೋಧಿ ರೈತ ವಿರೋಧಿ ಸರ್ಕಾರದ ಆಡಳಿತದಿಂದ ಜನಸಾಮಾನ್ಯ ರು ಕಂಗಾಲಾಗಿದ್ದಾರೆ. ನಿರಂತರ ಬೆಲೆಯೇರಿಕೆಯಿಂದ, ನಿರುದ್ಯೋಗದ ಸಮಸ್ಯೆಯಿಂದ

ಮಂಗಳೂರಿನ ಕೆಎಂಸಿ ಆಸ್ಪತ್ರೆ ವತಿಯಿಂದ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮ

ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್‌ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಕ್ರೀಡಪಾಟುಗಳು ಹಾಗೂ ಯುವ ಜನತೆಯಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ

ಸೆ.27ರಿಂದ ಪುತ್ತೂರಿನ ಸೋಮವಾರ ಸಂತೆಗೆ ಚಾಲನೆ

ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ ಮೈದಾನದ ಸೋಮವಾರದ ಸಂತೆಗೆ ಚಾಲನೆ ಸಿಗಲಿದೆ. ಕೋವಿಡ್ ಸೋಂಕು ಆರಂಭ ಆದ ಸಂದರ್ಭ ಕೋವಿಡ್ ಲಾಕ್‌ಡೌನ್

ಬೆಳಪುವಿನ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆಗೆ ಮಾಜಿ ಸಚಿವ ಸೊರಕೆಯ ಅವಗಣನೆ: ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ರಸ್ತೆಯನ್ನೂ

ರಾಜ್ಯ ಮಟ್ಟದ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಈಜುಪಟುಗಳಿಂದ ಪದಕಗಳ ಬೇಟೆ

ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್‌ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು

ಸೇವೆಯೇ ಪರಮ ಗುರಿಯಾಗಿರಲಿ: ಬೆಳ್ಳಾಲ ಗೋಪಿನಾಥ ರಾವ್

ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ

ಅಸ್ಸಾಂ ಸರ್ಕಾರ ಮತ್ತು ಪೊಲೀಸರು  ನಡೆಸಿದ ಕ್ರೂರ ಕೃತ್ಯದ ವಿರುದ್ಧ ಎಸ್‌ ಡಿಪಿಐ ಪ್ರತಿಭಟನೆ

ಅಸ್ಸಾಂ ಸರ್ಕಾರ ಬಡ 800 ಕುಟುಂಬಗಳ ಭೂಮಿಯನ್ನು ಅತಿಕ್ರಮಿಸುವ ಸಂದರ್ಭದಲ್ಲಿ  ಪ್ರತಿಭಟಿಸಿದ ಸ್ಥಳೀಯರ ಮೇಲೆ ಸರ್ಕಾರಿ ಪ್ರಾಯೋಜಿತ ಪೋಲಿಸ್ ದಾಳಿ ಮೂಲಕ ಅಮಾಯಕ ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಿದನ್ನು ಖಂಡಿಸಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತುಳುವಿಗೆ ಮಂಗಳೂರು ವಿವಿಯಿಂದ ಶೈಕ್ಷಣಿಕ ಪ್ರೋತ್ಸಾಹ

 ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್,