ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು.
ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ. ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ ಕಿರಿದಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು. ಇದರ ಮೇಲೆ ಕೆಂಪು ಕಲ್ಲು ಹಾಗೂ ಜಲ್ಲಿ ಕಲ್ಲು ಮಾಫಿಯಾಗಳು ಲಾರಿಗಳಲ್ಲಿ ಅಧಿಕ ಭಾರಗಳನ್ನು ಹೇರಿ ಸಾಗಾಟ ನಡೆಸುತಿದ್ದದ್ದು
ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಾಗರಿಕ ಜವಾಬ್ದಾರಿ
ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು
ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯುತ್ತ ಕಾಲೇಜಿನ ಅಟೊನಾಮಸ್ ವಿಭಾಗದ ಎನ್‌ಸಿಸಿ ಏರ್‌ವಿಂಗ್ ಕೆಡೆಟ್‌ಗಳಿಂದ ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಟ್ಟು 59 ಕೆಡೆಟ್‌ಗಳಿಂದ ಸ್ವಚ್ಛಾತಾ ಕಾರ್ಯ ನೆರವೇರಿತು. ಎನ್‌ಸಿಸಿ ಏರ್‌ವಿಂಗ್‌ನ ಅಫೀಸರ್ ಅಲ್ವಿನ್ ಸ್ಟೀಪನ್ ಮಿಸ್ಕಿತ್ ಅವರು ನೇತೃತ್ವವನ್ನು ವಹಿಸಿದ್ದರು. ಟಾಗೂರ್ ಪಾರ್ಕ್‌ನಲ್ಲಿದ್ದಂತಹ ಪ್ರತಿಮೆಯನನು ವಿದ್ಯಾರ್ಥಿಗಳು ಸ್ಚಚ್ಚಗೊಳಿಸಿದರು. ಇನ್ನು ವಿದ್ಯಾರ್ಥಿಗಳು ಬ್ಯಾನರ್
ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು
ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು. ನವಪರ್ವ ಫೌಂಡೇಶನ್
ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ ಹವಾಮಾನ ಬದಲಾವಣೆ, ಮನುಕುಲಕ್ಕೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದ ಭೂಮಿಯನ್ನು ರಕ್ಷಿಸುವ