Home Articles posted by v4news (Page 63)

ಪಶುಸಂಗೋಪನಾ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ

ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ……ರೈತರ ಗೋಳು ಕೇಳುವವರು ಯಾರು? ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು ಸಂಗೋಪನ ಆಸ್ಪತ್ರೆ ಕೆಲವು ವರ್ಷಗಳ ಹಿಂದೆಯೇ ನಿರ್ಮಾಣ ವಾಗಿದೆ.ಆದರೆ ಇದರ ಪರಿಸ್ಥಿತಿಯನ್ನು ನೋಡುವುದಾದರೆ ಈ

ಅನಾರೋಗ್ಯದಿಂದ ಬಳಲುತ್ತಿರುವ ಯುವಕ : ಕಾರ್ತಿಕ್ ಕುಟುಂಬಕ್ಕೆ ಬೇಕಾಗಿದೆ ಆರ್ಥಿಕ ಸಹಾಯ

ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಹಳ್ನಾಡು ಎಂಬಲ್ಲಿ ವಾಸವಾಗಿರುವ ಕಾರ್ತಿಕ್ (20) ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೆ ಇತ್ತ ತಂದೆ ಮಾನಸಿಕ ಅಸ್ವಸ್ಥರು. ಮನೆಯ ಸಂಪೂರ್ಣ ಜವಾಬ್ದಾರಿಯನ್ನು ತನ್ನ ತಲೆಯ ಮೇಲೆ ಹಾಕಿಕೊಂಡು, ತನ್ನ ವಿದ್ಯಾಭ್ಯಾಸವನ್ನೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿನ ಹೋಟೆಲ್ ನಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕಾರ್ತಿಕ್. ತನ್ನ ಎಳೆಯ ವಯಸ್ಸಿನಲ್ಲಿಯೇ ಸೋರುತ್ತಿದ್ದ ಮನೆಯನ್ನು ಮಾವನ ಸಹಾಯದಿಂದ ಹಾಗೂ ಬ್ಯಾಂಕಿನಿಂದ ಸಾಲ

ಆಗ್ನೇಯ ಆಸ್ಟ್ರೇಲಿಯಾದಲ್ಲಿ ಭೂಕಂಪ

ಆಗ್ನೇಯ ಆಸ್ಟ್ರೇಲಿಯಾದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್‌ನ ರಸ್ತೆಗಳತ್ತ ಓಡಿದ್ದಾರೆ. ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್ ಪೂರ್ವಕ್ಕೆ ಸ್ಥಳೀಯ ಸಮಯ 9.15 ಗಂಟೆ ಸಂದರ್ಭದಲ್ಲಿ ಭೂ ಕಂಪನ ಸಂಭವಿಸಿದೆ. ಅಮೆರಿಕದ ಜಿಯಾಲಾಜಿಕಲ್ ಸರ್ವೇ ಕಂಪನಿಯು ಭೂಕಂಪದ ಪ್ರಮಾಣವನ್ನು 5.8 ರಷ್ಟಿತ್ತು ಎಂದಿದೆ. ನಂತರ ಅದನ್ನು 5.9 ಕ್ಕೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್‍ಕ್ಲಬ್‍ನಲ್ಲಿ

ಮೆಸ್ಕಾಂ ಕಚೇರಿಯ ಎದುರು ರಾತ್ರೋ ರಾತ್ರಿ ಧರಣಿ

ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ

ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ

ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, 2006ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ತಮ್ಮ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳಿಂದ ಈ ವರೆಗೂ

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ್

ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚುವರಿ ತೆರಿಗೆಯನ್ನು ವಿಧಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು

ಟೀಮ್ ಬಿ- ಹ್ಯೂಮನ್ ಮಂಗಳೂರು : ಉಚಿತ ಕೋವಿಡ್ ಲಸಿಕಾ ಶಿಬಿರ

ಟೀಮ್ ಬಿ-ಹ್ಯೂಮನ್(ರಿ) ಮಂಗಳೂರು ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಹಾಗೂ ಟೀಂ ಮೇಕ್-ಎ-ಚೇಂಜ್ ಇದರ ಸಹಭಾಗಿತ್ವದಲ್ಲಿ ಉಚಿತ ಕೋರೋನ ಲಸಿಕಾ ಶಿಬಿರವು ಬಲ್ಮಠದ ಬಿಷಪ್ ಜತ್ತನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಇದು ಟೀಂ ಬಿ-ಹ್ಯೂಮನ್ ತಂಡವು ಆಯೋಜಿಸಿದ ಆರನೇ ಲಸಿಕಾ ಶಿಬಿರವಾಗಿತ್ತು. ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಿದಂತಹ ಈ ಲಸಿಕಾ ಶಿಬಿರದಲ್ಲಿ ಸುಮಾರು 272 ಜನಸಾಮಾನ್ಯರು,ಹೋಟೆಲ್ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ವಿಶೇಷ

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ