ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ
ಕರಾವಳಿ ಜಿಲ್ಲೆಯಲ್ಲಿ ಬಹುಪ್ರಸಿದ್ಧಿ ಪಡೆದಿರುವ ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ . ಬಾಲಕೃಷ್ಣ ರೈ ಕದ್ರಿ ಕಂಬ್ಲ ಅವರು ಇಂದು ನಿಧನರಾದರು . ಬಾಲಕೃಷ್ಣ ರೈ ಅವರು ಕನಕಪ್ಪಾಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿಯೂ ಸೇವೆ ಸಲ್ಲಿಸಿದ್ದರು .ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು . ಮೃತರುಪತ್ನಿ , ಮೂವರು ಹೆಣ್ಣು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ . #
ಮಂಗಳೂರು ದಕ್ಷಿಣದ ಮಾಜಿ ಶಾಸಕರಾದ ಜೆ. ಆರ್. ಲೋಬೊ, ಪಾಲಿಕೆಯ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಇಂದು ನಗರದ ಸ್ವಚ್ಛತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಬಹಳಷ್ಟು ಅನುಭವ ಇರುವ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಾಕಮನಂದಜಿ ಹಾಗೂ ಶ್ರೀ ಏಕಗಮ್ಯನಂದ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಅವರೊಡನೆ ಸಮಾಲೋಚನೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿ
ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು. ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು
ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್‌ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಸಿಐಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಕೃಷ್ಣ ಪ್ರಕಾಶ್, ಬಜ್ಪೆ
ಜಿಲ್ಲೆಯ ಹಲವು ದಶಕಗಳ ವಿಮಾನ ನಿಲ್ದಾಣ ಪ್ರಾರಂಭದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಯಾಗಲಿದೆ. ನಾಳೆಯಿಂದಲೇ ಮಾರ್ಕಿಂಗ್ ಕಾರ್ಯ ಪ್ರಾರಂಬಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ ವಿಮಾನ ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಇದೊಂದು ಮಹತ್ವಾಕಾಂಕ್ಷಿ
ಆಸ್ಕರ್ ಫೆರ್ನಾಂಡೀಸ್ ಅವರು ನನಗೆ ಶಾಸಕನಾಗಲು ಅವಕಾಶ ಮಾಡಿಕೊಟ್ಟಿದ್ದು, ನನ್ನೊಂದಿಗೆ ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಹಕಾರ ನೀಡಿದ್ದರು. ಬೈಂದೂರು ಕ್ಷೇತ್ರವನ್ನು ಮಾದರಿಯನ್ನಾಗಿಸುವಲ್ಲಿ ಆಸ್ಕರ್ ಅವರ ಶ್ರಮವೂ ಅಪಾರವಾದುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ
ಪುತ್ತೂರು : ಕಳೆದ 20 ವರ್ಷಗಳಿಂದ ಅತೀ ಕಡಿಮೆ ಸಂಬಳದಲ್ಲಿ ಕನಿಷ್ಟ ವೇತನವೂ ಸಿಗದೆ ಶಾಲಾ ಮಕ್ಕಳಿಗೆ ಪ್ರೀತಿಯಿಂದ ಅಡುಗೆ ತಯಾರಿಸಿ ಬಡಿಸುತ್ತಿರುವ ಬಿಸಿಯೂಟ ನೌಕರರ ಬಗ್ಗೆ ಸರಕಾರದ ನಿರ್ಲಕ್ಷ ಕೂಡ ಸರಕಾರದ ಮಹಿಳಾ ದೌರ್ಜನ್ಯ ಆಗಿದೆ ಎಂದು ಹಿರಿಯ ಕಾರ್ಮಿಕ ಮುಖಂಡರಾದ ಬಿ.ಎಂ.ಭಟ್ ಹೇಳಿದರು. ಅವರು ಸೆ.20 ರಂದು ಪುತ್ತೂರು ಮತ್ತು ಕಡಬ ತಾಲೂಕು ಅಕ್ಷರದಾಸೋಹ ನೌಕರರ ಸಮಾವೇಶವನ್ನುದ್ದೇಶಿಸಿ ಮಾತಾಡಿ ಕೆಲವು ಅಸಂಘಟಿತ ಕಾರ್ಮಿಕರಿಗೆ ಕೊರೋನಾ ಪ್ಯಾಕೇಜು ನೀಡಿದ ಸರಕಾರ
ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು ಸ್ವಾವಲಂಭಿಯಾಗಿ ಬದುಕು ಸಾಗಿಸುತ್ತಿರುವ ಸಾವಿರಾರು ಯುವಪಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ
ಕಾರ್ಕಳ: ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು ಮಾಡುತ್ತೀದ್ದು ತುಂಬಾ ಸಂತೋಷ ದ ವಿಷಯ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಡದ