Home Articles posted by v4news (Page 69)

ಹೆದ್ದಾರಿ ಸೂಚನಾ ಫಲಕಕ್ಕೆ ಅಳವಡಿಸಿದ ಕಟೌಟ್ ಗಳ ತೆರವು:ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಕಾರ್ಯಚರಣೆ

ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಅಂಗಾಂಗ ದಾನ

ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ ಮುಂದಾದರು. ಈ ಮಾಹಿತಿಯನ್ನು ಆಸ್ಪತ್ರೆಯಿಂದ ಜೀವನ ಸಾರ್ಥಕತೆ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ

ಬ್ರಹ್ಮಾವರದಲ್ಲಿ ಆಂಬುಲೆನ್ಸ್ ಟಯರ್ ಸ್ಪೋಟ: ತಪ್ಪಿದ ಭಾರೀ ದುರಂತ

ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ಆಂಬುಲೆನ್ಸ್‌ನ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು

ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಸೆ.27ರಂದು ಬೃಹತ್ ಪ್ರತಿಭಟನಾ ಸಭೆ

ಕೇಂದ್ರ ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಬಂದ್ ಸೆಪ್ಟಂಬರ್ 27ರಂದು ಬಿ.ಸಿ. ರೋಡ್‌ನಲ್ಲಿ ನಡೆಯಲಿದೆ. ಕೇಂದ್ರ ಸರಕಾರ ತಂದಿರು ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಬೆಳೆಗಳಿಗೆ ಕನಿಷ್ಟ ಬೆಂಬಲಬೆಲೆಯನ್ನು ಕಾನೂನಾತ್ಮಕ ಗೊಳಿಸಲು ಆಗ್ರಹಿಸಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರು ನಿರಂತರ ಹೋರಾಟಕ್ಕೆ ಸೆಪ್ಟೆಂಬರ್ 26ಕ್ಕೆ 10 ತಿಂಗಳು ತುಂಬುತ್ತದೆ.ಈ ನಿಟ್ಟಿನಲ್ಲಿ ಸಂಯುಕ್ತ

ಬುಡೋಳಿಯಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು ೫ ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ತಂಡ

ಹೆದ್ದಾರಿ ಸೂಚನಾ ಫಲಕಗಳಿಗೆ ಕಂಟಕ: ಹೆದ್ದಾರಿ ಇಲಾಖಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇಂಥಹುದೇ ಕೃತ್ಯವನ್ನು ದೇವಸ್ಥಾನವೊಂದರ ಕಾರ್ಯಕ್ರಮದ ಕಟೌಟ್ ಅಳವಡಿಸುವ ಮೂಲಕ ಚಾಲನೆ ನೀಡಿದ್ದು ಇಲ್ಲಿ ಸ್ಮರಿಸ ಬಹುದಾಗಿದೆ. ಇದೀಗ ಅದು ಮುಂದುವರಿದು ಆಸ್ಕರ್ ನಿಧನದ ಕಟೌಟ್

ವಾರದ ಸಂತೆ ನಡೆಸಲಾಗದೆ ನಗರಸಭೆಯ ಆದಾಯಕ್ಕೆ ಹೊಡೆತ: ಹಣ ಮರಳಿ ನೀಡುವಂತೆ ಬಿಡ್‌ದಾರರ ಮನವಿ

ಕೋವಿಡ್ ಹಿನ್ನೆಲೆಯಲ್ಲಿ ವಾರದ ಸಂತೆ ನಡೆಸಲಾರದೆ ಪುತ್ತೂರು ನಗರಸಭೆ ಆದಾಯಕ್ಕೆ ಕುತ್ತು ಬರುವ ಸ್ಥಿತಿ ನಿರ್ಮಾಣವಾಗಿದ್ದು, ಸಂತೆ ವರಿ ವಸೂಲಿಟೆಂಡರ್ ಪಡೆದುಕೊಂಡ ಬಿಡ್‌ದಾರರು ತಾವು ಕಟ್ಟಿದ ಹಣವನ್ನು ಮರಳಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಬಿಡ್‌ದಾರರನ್ನು ಕರೆಸಿ ಮಾತುಕತ ನಡೆಸಿ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ ನಿರ್ಣಯಿಸಿದೆ.ಅಧ್ಯಕ್ಷರಾದ ಜೀವಂಧರ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆದ

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು. ಸೆಪ್ಟೆಂಬರ್ ೧೬ ರಂದು ದಕ್ಷಿಣಕನ್ನಡ, ಉಡುಪಿ