ಲಾರಿಯಡಿಗೆ ಬಿದ್ದ ಬೈಕ್ಕಿಂದ ಎಸೆಯಲ್ಪಟ್ಟ ಸವಾರ ಅದೃಷ್ಟವಶಾತ್ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆ ಸೇರಿದ್ದಾರೆ. ಗಂಭೀರ ಗಾಯಗೊಂಡ ವ್ಯಕ್ತಿ ಬೆಳ್ಮಣ್ ನಿವಾಸಿ ವಿಲ್ಸನ್(44) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಲಾತೂರಿಗೆ ಹೋಗುತ್ತಿದ್ದ ಲಾರಿಯಡಿಗೆ ಪಡುಬಿದ್ರಿ ಕಡೆಯಿಂದ ಅದಮಾರು ಪತ್ನಿ ಮನೆಕಡೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಪಡುಬಿದ್ರಿ ಸೇತುವೆ ಬಳಿ
ಕಾಪು: ಲಾರಿ ಚಾಲಕ ವಿಶ್ರಾಂತಿಗಾಗಿ ಮಣ್ಣರಸ್ತೆಯಲ್ಲಿ ನಿಲ್ಲಿಸಿದ ಲಾರಿಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ನಡೆದಿದೆ. ಬೆಳಗಾವಿಯಿಂದ ಕೇರಳಕ್ಕೆ ಸಕ್ಕರೆ ಹೇರಿಕೊಂಡು ಸಾಗುತ್ತಿದ್ದ ಲಾರಿ ಚಾಲಕ ಪಕ್ಕದ ಮರದಡಿ ಗಾಡಿ ನಿಲ್ಲಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್ ಸವಾರ ತೊಕ್ಕೊಟ್ಟಿನ ನಿವಾಸಿ ದಿವಂಗತ
ಏಳೂರು ಮೊಗವೀರ ಮಹಾ ಸಭಾದ ವತಿಯಿಂದ ಭಾನುವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ ನೆರವೇರಿಸಿ, ಸಮುದ್ರ ದೇವತೆಗೆ ಹಾಲು, ತೆಂಗಿನಕಾಯಿ ಸಮರ್ಪಣೆ ನೆರವೇರಿಸಲಾಯಿತು. ಪಲಿಮಾರು, ಗುಂಡಿ, ಸಣ್ಣ ಗುಂಡಿ, ಹೆಜಮಾಡಿ, ಮಟ್ಟು, ಆಚೆಮಟ್ಟು ಹಾಗೂ ಕನ್ನಂಗಾರು ಸೇರಿ ಏಳು ಊರಿನ ಮೊಗವೀರ ಬಾಂಧವರು ಹಾಲು, ತೆಂಗಿನ ಕಾಯಿ, ಫಲವಸ್ತುಗಳನ್ನು ತಂದು ಸಮುದ್ರ ದೇವರಿಗೆ ಸಮರ್ಪಿಸಲಾಯಿತು.ಈ ಸಂದರ್ಭದಲ್ಲಿ ಏಳೂರು ಮೊಗವೀರ ಮಹಾ ಸಭಾದ ಸದಸ್ಯ, ಹೆಜಮಾಡಿ ಗ್ರಾಪಂ ಮಾಜಿ
ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿಯಲ್ಲಿ ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ಕುಂಟುತ್ತಾ ಸಾಗಿದ ಚತುರ್ಷ್ಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯ ಕಾಣುವ ಲಕ್ಷಣಗಳು ಗೊಚರಿಸುತ್ತಿದ್ದರೂ ಮಾಡಿದ ಕಾಮಗಾರಿ ಕೆಲವೇ ಗಂಟೆಗಳಲ್ಲಿ ಆಯುಷ್ಯ ಕಳೆದುಕೊಳ್ಳುತ್ತಿದ್ದರೂ ಪ್ರಶ್ನಿಸುವವರಿಲ್ಲದೆ, ಆನೆ ನಡೆದಿದ್ದೇ ದಾರಿ ಎಂಬಂತ್ತಾಗಿದೆ. ಪಡುಬಿದ್ರಿ- ಎರ್ಮಾಳು ಗಡಿಭಾಗಲ್ಲಿ ಹೆದ್ದಾರಿಗೆ ಕಿರು ಸೇತುವೆ ನಿರ್ಮಾಣ ಕಾರ್ಯ ಆರಂಭಿಸಿ ದಶಕಗಳೇ ಕಳೆದು ಇದೀಗ ಪೂರ್ಣಗೊಂಡು,
ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಹಾಕುವುದರಲ್ಲಿ ವಿಜಯಪುರ ನಗರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೊರೊನಾ 3ನೇ ಅಲೆ ನಮ್ಮ ಮೇಲೆ ಹೆಚ್ಚಿಗೆ ಪರಿಣಾಮ
ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ ಸಿಕ್ಕಿದೆ. ಇಬ್ಬರ ಹುಡುಗಿಯರ ನಡುವೆ ಒಬ್ಬ ಪ್ರೇಮಿ ಎನ್ನುವ ಕಥಾ ಹಂದರ ಹೊಂದಿರುವ ಚಿತ್ರವು ಬಹಳ
ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಸಮುದ್ರ ಪೂಜಾ ಕಾರ್ಯಕ್ರಮ ನಡೆಯಿತು. ಸಮುದ್ರ ಪೂಜೆಯ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.ಈ ಸಂದರ್ಭದಲ್ಲಿ ಮಿತ್ರಪಟ್ಟಣ ಮೊಗವೀರ ಸಮಾಜದ ಅಧ್ಯಕ್ಷರಾದ ರವೀಂದ್ರ
ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ ಗುರುವ ಕೊರಗ, ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ತಮ್ಮ 12ನೇ
ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕುಪೀಡಿತರ ಸಾವು ಏರಿಳಿಕೆಯಾದರೂ ಸತತ ಒಂದು ವಾರದಿಂದ ಪರೀಕ್ಷೆಗಳ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆ ವರದಿಯಾಗುತ್ತಿದೆ. ಈ ಮೂಲಕ ಮೂರನೇ ಅಲೆ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ. ಇದರ ಮಧ್ಯೆ ಸೋಮವಾರದಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ ಎಂದು ಸರಕಾರ ಹೇಳಿದೆ. ಈ ಮೊದಲು ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ


















