Home Articles posted by v4team

ಬಡಾಕೆರೆ: ರೈಲು ಡಿಕ್ಕಿ ಹೊಡೆದು ಚಿರತೆ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ ಗಂಡು ಚಿರತೆಯೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಬೆಳಗಿನ ಜಾವ 4.40 ರ ಸುಮಾರಿಗೆ ಇವೊಂದು ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ.ಉಪ ವಲಯ

ಅತೀ ವೇಗ, ಅಜಾಗರುಕತೆಯ ಚಾಲನೆ : ಚಾಲಕನ ವಿರುದ್ಧ ಕ್ರಮಕೈಗೊಂಡ ಮೂಡುಬಿದಿರೆ ಇನ್ಸ್ ಪೆಕ್ಟರ್

ಮೂಡುಬಿದಿರೆ: ಮಂಗಳೂರು – ಮೂಡುಬಿದಿರೆ ಮಾರ್ಗವಾಗಿ ನಿನ್ನೆ ( ಮಂಗಳವಾರ) ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬಸ್ KA 19 AB 1339 ನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಅವರು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಚಾಲಕನ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿರುವುದರಿಂದ ವಾಹನ ಸವಾರರು ಬಹಳ ಜಾಗರೂಕತೆಯಿಂದ ವಾಹನವನ್ನು ಚಲಾಯಿಸುವುದು ಅವಶ್ಯಕ. ಆದರೆ ಮಂಗಳವಾರ ಸಂಜೆ ವೇಳೆಯಲ್ಲಿ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಬೈಂದೂರು:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅಕ್ಟೋಬರ್ 03 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಗ್ರಾಮ ದೇವತೆಯಾದ ಶ್ರೀ ಉಪ್ಪುಂದ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ಬೆಳಿಗ್ಗೆ ದೇವಸ್ಥಾನದ ವತಿಯಿಂದ ದುರ್ಗಾಹೋಮ ಹಾಗೂ ಭಕ್ತರು ಸೇವಾ ರೂಪದಲ್ಲಿ ಶ್ರೀ

ಕುಕ್ಕೆ: ಪವಿತ್ರ ಬೋಜನ ಪ್ರಸಾದಕ್ಕೆ ವೈವಿಧ್ಯಮ ಪಾಯಸ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ

ಜಮ್ಮು ಮತ್ತು ಕಾಶ್ಮೀರ – ಖಾತೆ ತೆರೆದ ಎಎಪಿ – ದೋಡಾದಲ್ಲಿ ಗೆಲುವು

ಹೊಸ ರಾಜ್ಯಗಳಿಗೆ ವಿಸ್ತರಿಸಿಕೊಳ್ಳುವ ಆಮ್ ಆದ್ಮಿ ಪಕ್ಷದ ಪ್ರಯತ್ನವು ಜಮ್ಮು ಮತ್ತು ಕಾಶ್ಮೀರದಲ್ಲಿ ಫಲ ನೀಡಿದೆ.ದೋಡಾ ವಿಧಾನ ಸಭಾ ಕ್ಷೇತ್ರದಲ್ಲಿ ಮೆಹ್ರಾಜ್ iಲಿಕ್ ಅವರು ಎಎಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅವರು ಬಿಜೆಪಿಯ ಅಭ್ಯರ್ಥಿ ಗಜಯ್ ಸಿಂಗ್ ರಾಣಾರನ್ನು ಸೋಲಿಸಿದರು. ೩೬ರ ಮಲಿಕ್ ಅವರು ರಾಜ್ಯಪಾಲರ ಆಡಳಿತದ ಕಟು ಟೀಕಾಕಾರರಾಗಿ ಜನಪ್ರಿಯತೆ ಗಳಿಸಿದ್ದರು.

ಎನ್‌ಸಿಯ ಓಮರ್ ಅಬ್ದುಲ್ಲಾ ಮತ್ತೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ

ನ್ಯಾಶನಲ್ ಕಾನ್ಫರೆನ್ಸ್‌ನ ನಾಯಕ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ಇಂಡಿಯಾ ಮೈತ್ರಿ ಕೂಟವು ಸ್ಪಷ್ಟಪಡಿಸಿದೆ.ಶೇಖ್ ಅಬ್ದುಲ್ಲಾ, ಅವರ ಮಗ ಫಾರೂಕ್ ಅಬ್ದುಲ್ಲಾ ಹಾಗೂ ಮೊಮ್ಮಗ ಓಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದರು. ಈಗ ಅಲ್ಲಿ ಇಂಡಿಯಾ ಮೈತ್ರಿ ಕೂಟವು ಬಹುಮತ ಸಾಧಿಸಿದೆ; ಅದರಲ್ಲಿ ಎನ್‌ಸಿ ಬಹುತೇಕ ಸ್ಥಾನಗಳನ್ನು ಗೆದ್ದಿದೆ. ಈಗ ಓಮರ್ ಅಬ್ದುಲ್ಲಾರು ಜಮ್ಮು

ಸಚಿನ್ ತೆಂಡೂಲ್ಕರ್ – ಬ್ಯಾಂಕ್ ಆಫ್ ಬರೋಡಾ ಜಾಗತಿಕ ಬ್ರಾಂಡ್ ಅಂಬಾಸಿಡರ್

ಮುಂಬೈ, ಅಕ್ಟೋಬರ್ 07, 2024: ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. ಶ್ರೇಷ್ಠತೆ ಮತ್ತು ವಿಶ್ವಾಸದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಈ ಪಾಲುದಾರಿಕೆಯು ಬ್ಯಾಂಕಿನ ರೂಪಾಂತರ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. “ಪ್ಲೇ ದಿ ಮಾಸ್ಟರ್‌ಸ್ಟ್ರೋಕ್” ಎಂಬ ಶೀರ್ಷಿಕೆಯ ಮೊದಲ ಅಭಿಯಾನವು ಒಂದು ಶತಮಾನದ ಪರಂಪರೆಯನ್ನು ಹೊಂದಿರುವ

ಇದು ಪ್ರತಿಯೊಬ್ಬ ಹುಡುಗಿಯ ಹೋರಾಟ – ವಿನೇಶಾ ಪೋಗಟ್

ಪ್ರತಿಯೊಬ್ಬ ಮಹಿಳೆಯು ಹೋರಾಟದಲ್ಲಿ ತೊಡಗಿದ್ದು, ತನ್ನ ಹೋರಾಟದ ದಾರಿಯನ್ನು ಆಯ್ಕೆ ಮಾಡಿಕೊಂಡು, ಮುನ್ನಡೆಯಬೇಕು ಎಂದು ಹೊಸ ಶಾಸಕಿ ಕುಸ್ತಿಪಟು ವಿನೇಶಾ ಪೋಗಟ್ ಹೇಳಿದರು. ಇದು ಪ್ರತಿಯೊಬ್ಬ ಹುಡುಗಿಯ ಹೋರಾಟ. ಪ್ರತಿಯೊಬ್ಬ ಮಹಿಳೆಯು ತನ್ನ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ನನಗೆ ದಕ್ಕಿರುವ ಗೆಲುವು ಹೋರಾಟದ ಗೆಲುವಾಗಿದೆ, ಸತ್ಯದ ಗೆಲುವಾಗಿದೆ. ಈ ದೇಶ ನನಗೆ ನೀಡಿರುವ ಪ್ರೀತಿ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಹೊಸದಾಗಿ ವಿಧಾನಸಭೆ

ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ :ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸ್ಥಾಪಕರಾದ