Home Articles posted by v4team (Page 258)

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಅರುಣ್ ಕುಮಾರ್ ಪುತ್ತಿಲ ಅವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಿದ್ದಗಂಗಾ ಮಠದಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ಹಾಗು ಕಿರಿಯ ಶ್ರೀ ಗಳಾದ ಪೂಜ್ಯ ಶ್ರೀ ಶಿವಸಿದ್ಧೇಶ್ವರ

ಸೋಮೇಶ್ವರದಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರ ವಶ

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಅನ್ಯಧರ್ಮಕ್ಕೆ ಸೇರಿದ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಾರೆಂಬ ಕಾರಣಕ್ಕೆ ತಂಡವೊಂದು ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಕೇರಳ ಚೆರ್ಕಳದ ಜಾಫರ್ ಶರೀಫ್

ಮನೋರಂಜನಾ ಕ್ಷೇತ್ರದಲ್ಲಿ ಬೆಳೆಯಲು ವಿಪುಲ ಅವಕಾಶಗಳಿವೆ: ಚರಿಷ್ಮಾ ಚೋಂದಮ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್‌ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ

ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ – ‘ಎಸ್.ಡಿ.ಎಂ. ನೆನಪಿನಂಗಳ’

ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ 31ರಂದು ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ‘ಎಸ್.ಡಿ.ಎಂ. ನೆನಪಿನಂಗಳ’ದ ನಾಲ್ಕನೆಯ ಕಂತಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

kadaba : ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿ

ಕಡಬ : ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ ಬದಿ ಕಾಡಾನೆ ನಿಂತಿತ್ತು. ಆನೆಯನ್ನು ನೋಡಿದ ಬಸ್ ಚಾಲಕ ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ.

ಉಳ್ಳಾಲ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿವಾಹಿತ ಬಳ್ಳಾರಿಯಲ್ಲಿ ಪತ್ತೆ

ಉಳ್ಳಾಲ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಮೇ 30 ರಂದು ಗರ್ಭಿಣಿ ಪತ್ನಿ ಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ನ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದಾರೆ. ನಂತರ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದರು. ಈ ಕುರಿತು

ಸೇವಾಭಾರತಿಯ ಚೇತನಾ ಬಾಲವಿಕಾಸ ಕೇಂದ್ರ – ಶಾಲಾ ಪ್ರಾರಂಭೋತ್ಸವ

ಸೇವಾಭಾರತಿ ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲಾ ಪ್ರಾರಂಭೋತ್ಸವವು ವಿಜೃಭಣೆಯಿಂದ ಜರುಗಿತು. ಕಲಶ, ಕೊಡೆ, ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ನಲಂದಾ ಶಾಲಾ ಪರಿಸರದಿಂದ ಚೇತನಾ ಶಾಲೆಯವರಗೆ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಭಿನ್ನ ಸಾಮಥ್ರ್ಯದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಸುಧಾಕರ ಕೊಟಾರಿ,ಜನರಲ್ ಮ್ಯಾನೇಜರ್,ಕೆನರಾ

Mangaluru : ವಿಶ್ವ ರೆಡ್ ಕ್ರಾಸ್ ದಿನಾಚರಣೆ- ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣೆ

ವಿಶ್ವ ರೆಡ್‍ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ| ಎಂ. ಎಸ್.ಮೂಡಿತ್ತಾಯ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಎಂ.ಎಸ್.ಮೂಡಿತ್ತಾಯ ಇಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾಗಿ, ಕುಲಸಚಿವರಾಗಿ ಮತ್ತು ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೆಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅದಲ್ಲದೆ ಅವರು ನಿಟ್ಟೆಯಲ್ಲಿರುವ ಜಸ್ಟಿಸ್ ಕೆ. ಎಸ್. ಹೆಗ್ಡೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೆಶಕರಾಗಿ, ಡಾ| ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ

ಕಡಬ : ವಿದ್ಯುತ್ ಲೈನ್‍ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‍ಮ್ಯಾನ್ ಸಾವು

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್‍ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ